ಬೆಂಗಳೂರು: ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್ ನೀಡಿರುವ ಪ್ರಕರಣಕ್ಕೆ ಈಗ ಟ್ವಿಸ್ಟ್ ದೊರೆತಿದೆ.
ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದೆ.`ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ.
ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ’ ಎಂಬ ಮುಖ್ಯಮಂತ್ರಿಗಳ ಹೇಳಿಕೆಯನ್ನು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.
ಹಿರೇಮಗಳೂರು ಕಣ್ಣನ್ ಅವರು ಕಳೆದ 44 ವರ್ಷಗಳಿಂದ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.