This is the title of the web page
This is the title of the web page

ಬಹುಮತದೊಂದಿಗೆ ಅಧಿಕಾರಕ್ಕೆ: ಸಿಎಂ ವಿಶ್ವಾಸ

ಬೆಂಗಳೂರು: ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ.
ಕೆಲವು ಅಸಮಧಾನಿತರ ಜೊತೆ ಮಾತಾಡುವ ಕೆಲಸ ನಡೆದಿದೆ. ಲಕ್ಷ್ಮಣ ಸವದಿ ಅವರೊಂದಿಗೆ ಮಾತಾಡಿದ್ದು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ತಿಳಿಸಿರುವುದಾಗಿ ಹೇಳಿದರು.

ಸವದಿ ಜೊತೆ ಭಾವನಾತ್ಮಕವಾದ ಸಂಬಂಧ ಇದೆ. ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು,ಅವರು ಕಷ್ಟದಲ್ಲಿದ್ದಾಗ ಪಕ್ಷ ಕೈ ಹಿಡಿದಿದೆ. ಮುಂದೆಯೂ ಅವರ ಕೈ ಹಿಡಿಯುತ್ತದೆ. ಅವರ ಗೌರವ ಕಾಪಾಡಲು ಒಳ್ಳೆಯ ನಿರ್ಧಾರ ಮಾಡಲಾಗುತ್ತದೆ. ಅವರಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ ಎಂದರು.