ಕಲಬುರಗಿ: ರಾಜ್ಯದಲ್ಲಿ ಸಾಲ ಮನ್ನಾ ಮಾಡುವ ಸಂಬಂಧ ಪರಿಶೀಲನೆ ನಡೆಸುವುದಾಗಿ ಮುಖ್ಯಮಮತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಕಲಬುರಗಿ ಅತಿಥಿ ಗೃಹದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಸಂಬಂಧ ಯಾವ ರೀತಿ ಸಾಲಮನ್ನಾ ಮಾಡಬೇಕು. ಹೇಗೆ ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆ ನಂತರ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯಿಂದ ರಾಜ್ಯದಲ್ಲಿ ಜಿಲ್ಲಾ ಪ್ರವಾಸ ಆರಂಭಿಸಿರುವ ಅವರು, ಮೊದಲಿಗೆ ಬೀದರ್ ಪ್ರವಾಸ ಮುಗಿಸಿ ಇಂದು ಕಲಬುರಗಿಗೆ ಆಗಮಿಸಿರುವ ಅವರು ಇಂದು ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಯ ಪ್ರಗತಿಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಹಲವರು ಸಮಸ್ಯೆಗಳನ್ನು ತಿಳಿಸಿದ್ದಾರೆ ಎಂದು ಹೇಳಿರುವ ಅವರು, ಸಮಸ್ಯೆಗಳ ಪರಿಹಾರಕ್ಕೆಂದೇ ರಾಜ್ಯ ಸರ್ಕಾರ ಹೊಸದಾಗಿ ಪ್ರಜಾಸೇವಾ ಇಲಾಖೆಯನ್ನು ಆರಂಭಿಸಿದೆ. ಇಲ್ಲಿ ಇವುಗಳ ಬಗ್ಗೆ ಪರಾಮರ್ಶೆ ನಡೆಸಲಾಗುವುದು. ಬರಪರಿಸ್ಥಿತಿ ಘೋಷಣೆ ಮಾಡಬೇಕು ಎಂದು ಬೇಡಿಕೆಯಿಟ್ಟಿದ್ದಾರೆ. ಹಳ್ಳಿಗಳ ಸಮಸ್ಯೆ ಸಂಬಂಧ ಪರಿಶೀಲಿಸಿ ಅವುಗಳನ್ನು ಪರಿಹಾರ ಮಾಡಲು ಮುಂದಾಗುವುದಾಗಿ ತಿಳಿಸಿದರು. ಯಾವ ಸಮಸ್ಯೆ ಹೇಗೆ ಬಗೆಹರಿಸಬೇಕು ಎಂಬುದನ್ನು ಕಾನೂನಿನ ಚೌಕಟ್ಟಿನಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಇನ್ನೆರೆಡು ಮೂರು ದಿನಗಳಲ್ಲಿ ತಾವು ಬೆಳಗಾವಿ ಪ್ರವಾಸ ಹಮ್ಮಿಕೊಳ್ಳುವುದಾಗಿ ಹೇಳಿದರು.ಕಲ್ಬುರ್ಗಿಯ ಶರಣ ಬಸವೇಶ್ವರ ಸಂಸ್ಥಾನದ ಹಿಂದಿನ ಪೀಠಾಧಿಪತಿ ಶ್ರೀ ಶರಣ ಬಸವೇಶ್ವರ ಅಪ್ಪ ಗದ್ದುಗೆಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನಮಿಸಿದರು. ಈಗಿನ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ, ಡಿಸಿಎಂ ಜಿ ಪರಮೇಶ್ವರ, ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಯು ಟಿ ಖಾದರ್, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.
ಸಾಲಮನ್ನಾ ಪರಿಶೀಲನೆ ಕಲಬುರಗಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ



