ಬೆಂಗಳೂರು: ಸಚಿವ ಡಿ.ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ನಡೆಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ. ಇಂದು ಅವರು ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಬರ ಪ್ರವಾಸದ ನೆಪದಲ್ಲಿ ಅವರು ಆ ಕ್ಷೇತ್ರ ವ್ಯಾಪ್ತಿಯ ಐದಾರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರು ವಿಭಾಗದ ಬರ ಪರಿಶೀಲನೆ ಕಾರ್ಯಕ್ರಮವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದಾರೆ ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿರುವ ಅವರು ನಾಳೆಯೂ ಸಹ ಚಿತ್ರದುರ್ಗ ಜಿಲ್ಲೆಯಲ್ಲೇ ತಮ್ಮ ಪ್ರವಾಸವನ್ನು ಮುಂದುವರಿಸಲಿದ್ದಾರೆ.
ಹಿರಿಯೂರು ಉಪಚುನಾವಣೆ ಸಿದ್ಧತೆಗೆ ಮುಂದಾದ ಸಿಎಂ



