ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿದ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿಯವರು ದಿಢೀರ್ ಎಂದು ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಕಾರ್ಯಕಾರಿಣಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪಕ್ಷದ ಕಾರ್ಯಕಾರಿಣಿ ಸಭೆ ನಂತರ ಹೈಕಮಾಂಡ್ ವರಿಷ್ಠರನ್ನು ಮುಖ್ಯಮಂತ್ರಿಯವರು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಾತುಕತೆ ನಡೆದಿದ್ದೇ ಆಗಲಿ ವರಿಷ್ಠರೊಂದಿಗೆ ನಡೆಸುವ ಮಾತುಕತೆ ಭಾರಿ ಮಹತ್ವ ಪಡೆದುಕೊಳ್ಳಲಿದೆ ಎಂದು ತಿಳಿದುಬಂದಿದೆ.



