ಕೊಚ್ಚಿನ್: ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಸಿಎಂ ಪಿಣರಾಯಿ ವಿಜಯನ್ ಸಂಚು ರೂಪಿಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಸದಸ್ಯರು ತಮ್ಮ ಮೇಲೆ ಕಪ್ಪು ಬಾವುಟ ಪ್ರದರ್ಶಿಸಿ ತೀವ್ರ ಪ್ರತಿಭಟನೆ ಮಾಡಿದ್ದ ಪ್ರಕರಣವನ್ನು ಪೂರ್ವ ನಿಯೋಜಿತ ಕೃತ್ಯ ಎಂದು ಕರೆದಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು,
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ವಿದ್ಯಾರ್ಥಿ ಸಂಘಟನೆಗಳ ಸೋಗಿನಲ್ಲಿರುವ ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.