ಮೈಸೂರು: ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದಾರೆ.ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಹರಕೆ ತೀರಿಸಿದ ಸಿಎಂ ಪತ್ನಿ ಉಷಾ ಸಿಎಂ ಅವರ ಪತ್ನಿ ಉಷಾ ಶಿವಕುಮಾರ್ ಇಂದು ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಮ್ಮ ವಿಶೇಷ ಹರಕೆಯೊಂದನ್ನು ತೀರಿಸಿದ್ದಾರೆ.ತಮ್ಮ ಪತಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ನಾಡದೇವತೆ ಚಾಮುಂಡೇಶ್ವರಿಗೆ ಉಡಿಸಲು ಸೀರೆ ನೀಡುವುದಾಗಿ ಉಷಾ ಶಿವಕುಮಾರ್ ಅವರು ಈ ಹಿಂದೆ ಹರಕೆ ಹೊತ್ತಿದ್ದರು. ಅದರಂತೆ, ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಅತ್ಯಂತ ಪವಿತ್ರ ದಿನದಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಪತ್ನಿ ಮತ್ತು ವಿಜಯಲಕ್ಷ್ಮೀ ದರ್ಶನ್



