ಕಲಬುರಗಿ: ರಾಜ್ಯದಲ್ಲಿ ಎದುರಾಗುತ್ತಿರುವ ಬರ ಪರಿಸ್ಥಿತಿ ಸಂಬAಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ಕಲಬುರಗಿ ಬೀದರ್ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಘೋಷಿಸುವ ಸಂಬAಧ ಅದರದೇ ಆದ ನಿಯಮಗಳಿವೆ. ಅದರಂತೆ ಘೋಷಣೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಸಮೀಕ್ಷೆ ನಡೆಸಿ ಮಾಹಿತಿ ಪಡೆದು ಕೇಂದ್ರಕ್ಕೆ ವರದಿ ನೀಡಲು ಜಿಲ್ಲಾ ಮಟ್ಟದ ಸಚಿವ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಮಾಹಿತಿ ಸಂಗ್ರಹಣೆ ನಂತರ ಇದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.



