ತಿ. ನರಸೀಪುರ: ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ವ್ಯಾಸಂಗದಿಂದ ವಂಚಿತರಾಗ ಬಾರದೆಂದು ಪಟ್ಟಣದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣಕ್ಕೆ ಒತ್ತು ನೀಡಿ ಕಾಲೇಜು ಪ್ರಾರಂಭಿಸಲಾಯಿತು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದರು.
ಪಟ್ಟಣದ ಹಳೇ ಸಂತೆ ಮಾಳದ ಬಳಿ ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 5 ಕೋಟಿ ವೆಚ್ಚದ 13 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಡಾ. ಎಚ್ ಸಿ ಮಹದೇವಪ್ಪ ಬಡವರ್ಗದ ಮಕ್ಕಳು ದೂರದ ಪಟ್ಟಣದತ್ತ ಉನ್ನತ ಶಿಕ್ಷಣಕ್ಕೆ ಹೋಗುವುದು ಕಷ್ಟ ಅಂತ ತಿಳಿದು ಇಲ್ಲಿ ಉನ್ನತ ಶಿಕ್ಷಣ ಕಾಲೇಜಿಗೆ ಅತಿ ಹೆಚ್ಚು ಅನುಧಾನ ನೀಡಿ ಪ್ರಾರಂಭ ಮಾಡಿಸಿದ್ದೇನೆ ಎಂದರು.
ಕಾಲೇಜು ಪ್ರಾರಂಭವಾದ ನಂತರ ಇಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಕಾಲೇಜಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಈ ಕೆಲಸ ನನಗೆ ತುಂಬಾ ಸಂತೋಷ ತಂದು ಕೊಟ್ಟಿದೆ ಇಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಕಾಲೇಜಿನ ಸೌಲಭ್ಯಗಳನ್ನು ಪಡೆದುಕೊಂಡು. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳಬೇಕು ಎಂದು ಸಲಹೆ ನೀಡಿದರು.
ಕಟ್ಟಡದ ಕಾಮಗಾರಿಯು 9. ತಿಂಗಳಲ್ಲಿ ಸಂಪೂರ್ಣವಾಗಿ ಮುಗಿಯಬೇಕು ಮತ್ತು ಗುಣಮಟ್ಟದಿಂದ ಕೂಡಿರಬೇಕು ಎಂದು ಗುತ್ತೇದಾರರಿಗೆ ತಾಕೀತು ಮಾಡಿದರು ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿಗೆ ಬೇಕಾಗಿರುವ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕೂಡಲು ಬದ್ದನಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಕೆ ಡಿ ಪಿ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಸುನಿಲ್ ಬೋಸ್, ತಾ. ಪಂ.ನಿಕಟ ಪೂರ್ವ ಅಧ್ಯಕ್ಷ ಹ್ಯಾಕನೂರು ಉಮೇಶ್, ಪುರಸಭಾ ಮಾಜಿ ಅಧ್ಯಕ್ಷ ಮದನ್ ರಾಜು ಮಾಜಿ ತಾ.ಪಂ. ಸಾಮಾಜೀಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕುಕ್ಕೂರ್ ಗಣೇಶ್, ರಾಮಲಿಂಗಯ್ಯ ಮುಖಂಡರಾದ ತಲಕಾಡು ನರಸಿಂಹ ಮಾದನಾಯಕ,
ಬಸವಣ್ಣ, ಲಕ್ಷ್ಮಣ, ಬಸವರಾಜು, ರಾಘು, ಶಿವರಾಂ, ಪರಶಿವಮೂರ್ತಿ, ತಹಶೀಲ್ದಾರ್ ಸುರೇಶಾಚಾರ್, ಪ್ರಾಂಶುಪಾಲ ಉದಯಕುಮಾರ್, ಪುಟ್ಟಸ್ವಾಮಿ ಡಾ. ಮಾದೇವಿ. ಬಿಇಒ ಶೋಭಾ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಶಾಂತ, ಉಪನ್ಯಾಸಕರು ಸಿಬ್ಬಂದಿಗಳು, ಪಕ್ಷದ ಕಾರ್ಯಕರ್ತರು ಮುಖಂಡರು ಹಾಜರಿದ್ದರು.