ನವದೆಹಲಿ/ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಎನ್ಜಿ ದರ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಶಾಕ್ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕöÈತ ದರ ಇಂದಿನಿಂದಲೇ ಜಾರಿಯಾಗಲಿದೆ.
ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರ 42 ರೂ. ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ.ಗಳಿಗೆ ಏರಿಕೆಯಾಗಿದೆ.ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ದರ 53.5 ರೂ. ಹೆಚ್ಚಾಗಿದ್ದು, 3,255.5 ರೂ. ತಲುಪಿದೆ. ಇದರೊಂದಿಗೆ 5 ಕೆಜಿ ಫ್ರೀ ಟ್ರೇಡ್ ಎಲ್ಪಿಜಿ ಸಿಲಿಂಡರ್ಗಳ ಮೇಲಿನ ಬೆಲೆ 11 ರೂ. ಹೆಚ್ಚಿಸಿದ್ದು, ಪ್ರತಿ ಸಿಲಿಂಡರ್ ಬೆಲೆ 821.5 ರೂ.ಗಳಿಗೆ ತಲುಪಿದೆ.
ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ



