ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ಗಿಫ್ಟ್ ಕಾರ್ಡುಗಳನ್ನು ಹಂಚಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಹಲವು ಗಿಫ್ಟ್ ಕಾರ್ಡ್ಗಳನ್ನು ಮಾಧ್ಯಮದವರ ಮುಂದೆ ಪ್ರದರ್ಶಿಸಿ ಮಾತನಾಡಿರುವ ಕುಮಾರಸ್ವಾಮಿ ಅವರು, ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲ ಎಂದು ಕಿಡಿಕಾರಿದ್ದಾರೆ.ಹಣ ಹಂಚಿಕೊಂಡು ಚುನಾವಣಾ ನಡೆಸಲು ಅವಕಾಶ ಮಾಡಿಕೊಟ್ಟುಬಿಡಿ ಎಂದು ಆಯೋಗದ ಮೇಲೆ ಕಿಡಿಕಾರಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರವಾಗಿ ಕ್ಯೂ ಆರ್ ಕೋಡ್ ಇರುವ ಕೂಪನ್ ಗಳ ಹಂಚಿಕೆ ಮಾಡಲಾಗಿದೆ.
ಇದನ್ನು ತಡೆಯಲು ಹೋದ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ.ಕುಸುಮ ಹನುಮಂತಯ್ಯ, ಕುಣಿಗಲ್ ಶಾಸಕ ಡಾ.ರಂಗನಾಥ್, ಮಾಗಡಿ ಶಾಸಕ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಕೂಪನ್ ಕಾರ್ಡುಗಳ ಹಂಚಿಕೆ ಮಾಡಲಾಗಿದೆ ಎಂದು ದೂರಿದ್ದಾರೆ.