ಹೊಸಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಪ್ರಭಾರಿ ಆರೋಗ್ಯ ನಿರೀಕ್ಷಣಾ ಧಿಕಾರಿ ಶಿವಕುಮಾರ್ ರವರು ಪ್ರತಿವರ್ಷದಂತೆ ಈ ವರ್ಷವೂ ಸಹ ರಾಷ್ಟ್ರೀಯ ಡೆಂಗ್ಯೂದಿನಾ ಚರಣೆ 2024 ರನ್ನು “ಸಮುದಾಯದೊಂದಿಗೆ ಸೇರಿ ಡೆಂಗ್ಯೂ ಜ್ವರವನ್ನು ನಿಯಂತ್ರಿಸೋಣ”ಎಂಬ ಘೋಷ ವಾಕ್ಯದೊಂದಿಗೆ ಆಚರಿಸು ತಿದ್ದೇವೆ. ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾಕ್ರಮಗಳಾದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು ವಿಶೇಷವಾಗಿ ವೃದ್ಧರು ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಬಳಸಬೇಕುಡೆಂಗ್ಯೂ ಮತ್ತು ಚಿಕುನ್ ಗುನ್ಯಾಕ್ಕೆ ಒಳಗಾದವರು ಸಹ ರೋಗಿಗಳು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು ಸೊಳ್ಳೆಗಳು ಕಚ್ಚದಂತೆ ಮೈತುಂಬ ಬಟ್ಟೆ ಧರಿಸಿ ಸೊಳ್ಳೆ ಪರದೆ, ಸೊಳ್ಳೆಭತ್ತಿ, ಮುಲಾಮು ದ್ರಾವಣವನ್ನು ಬಳಸಬೇಕು.
ಎಲ್ಲ ಸರಕಾರಿ ಮತ್ತು ಖಾಸಗಿ ಕಚೇರಿಗೆ ಒಳಾಂಗಣ ಮತ್ತು ಹೊರಾಂಗಣದಲ್ಲಿ ಈಡಿಸ್ ಈಜಿಪ್ಟ್ ಸೊಳ್ಳೆಯ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸೊಳ್ಳೆಗಳ ಉತ್ಪತ್ತಿ ತಡೆಗೆ ಮನೆಯಲ್ಲಿನ ನೀರಿನ ತೊಟ್ಟಿ, ನೀರು ಸಂಗ್ರಹಣೆಗೆ ಬಳಸುವ ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕುಫ್ರಿಡ್ಜ್ ಹಿಂಭಾಗ, ಹೂಕೊಂಡ ಮತ್ತುಹೂಕುಂಡದ ಕೆಳಗಿನ ತಟ್ಟೆಗಳಲ್ಲಿ ಶೇಖರಣೆ ಯಾಗುವ ನೀರನ್ನು ನಿಯಮಿತವಾಗಿ ಖಾಲಿ ಮಾಡಬೇಕು.
ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಘನತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ಪರಿಸರವನ್ನು ಸ್ವಚ್ಛವಾಗಿರಿಸಬೇಕು
ಡೆಂಗಿ ಜ್ವರದ ಲಕ್ಷಣಗಳಾದ ತೀವ್ರ ಜ್ವರ ವಿಪರೀತ ತಲೆನೋವು ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸ ಕಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಕಂಡುಬಂದಲ್ಲಿ ನಿರ್ಲಕ್ಷ್ಯ ತೋರದೆ ಹಾಗೂ ಯಾವುದೇ ರೀತಿಯ ಸ್ವಚಿಕಿತ್ಸೆ, ಮೂಢನಂಬಿಕೆಗಳಿಗೆ ಒಳಗಾಗದೆ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ರಕ್ತ ಪರೀಕ್ಷೆ ಮಾಡಿಸುವುದರ ಜೊತೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಲು ತಿಳಿಸಿದರು,
ಈಗಾಗಲೇ ಆರೋಗ್ಯ ಇಲಾಖೆಯಿಂದ ದಿನನಿತ್ಯ ಕಸ ಸಂಗ್ರಹಣ ವಾಹನಗಳಿಗೆ ಡೆಂಗಿ ನಿಯಂತ್ರಣಕ್ಕೆ ಭಿತ್ತಿ ಪತ್ರಗಳು ಹಾಗೂ ಆಡಿಯೋ ಕ್ಲಿಪ್ಲಿಂಗ್ ಮುಖೇನ ಅರಿವು ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ದಿನನಿತ್ಯ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಜನಸಾಮಾನ್ಯರು ಮಾಹಿತಿಯನ್ನು ಪಡೆದು ನಗರಸಭೆ ಹಾಗೂ ಆರೋಗ್ಯ ಇಲಾಖೆಯೊಡನೆ ಸಹಕರಿಸಿ ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ ಎಂಬ ಮಾಹಿತಿಯನ್ನು ನೀಡಿದರು.
ಸದರಿ ಕಾರ್ಯಕ್ರಮದಲ್ಲಿ ನಗರ ಸಭೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಬಾಲಚಂದ್ರ, ಆಂಜಿನಪ್ಪ, ನಸ್ರೀನ್ ತಾಜ್, ಆರೋಗ್ಯ ಇಲಾಖೆಯ ತಾಲೂಕು ಪ್ರಭಾರಿ ಆರೋಗ್ಯ ಶಿಕ್ಷಣಾಧಿಕಾರಿ ರವಿಕುಮಾರ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್, ನಗರಸಭೆಯ ಸಿಬ್ಬಂದಿ ವರ್ಗದವರು ಮತ್ತು ಪೌರಕಾರ್ಮಿಕರು ಹಾಜರಿದ್ದರು.