ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಲುಕ್ ಪೋಸ್ಟರ್ ಬಿಡುಗಡೆಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಸಂಗಮೇಶ್ವರರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.
ಮುಹೂರ್ತ ಸಮಾರಂಭಕ್ಕೂ ಮುನ್ನ ಚಿತ್ರದ ನಿರ್ಮಾಪಕರಾದ ಮಾಧವಾನಂದ ಯೋಗಪ್ಪ ಶೇಗುಣಸಿ ಹಾಗೂ ನಿರ್ದೇಶಕ ರಾಜಾ ರವಿಶಂಕರ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀರಾಘವೇಂದ್ರ ಗುರು ಸಾರ್ವಭೌಮರ ದರ್ಶನ ಪಡೆದುಕೊಂಡರು. ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.ರಾಮಕೃಷ್ಣ, ರವಿ ನಾರಾಯಣ್(ಹೊಸ ಪರಿಚಯ), ಸುಂದರರಾಜ್, ವಿಜಯಕಾಶಿ, ವಿನಯಪ್ರಸಾದ್, ಭವ್ಯಶ್ರೀ ರೈ, ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.