ರಾಮನಗರ: ಜಿಲ್ಲೆಯ ಮಾಗಡಿ ತಾಲ್ಲೂಕಿನ ತಿಪ್ಪಸಂದ್ರದಲ್ಲಿ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಮತ್ತು ಮಾಜಿ ಸಚಿವ ಹೆಚ್.ಎಂ ರೇವಣ್ಣನವರು ಪ್ರಚಾರ ವಾಹನದಲ್ಲಿ ಸಾಗುವ ಮಾರ್ಗದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ಅಭಿಮಾನಿಗಳು ರೋಡ್ ಶೋ ವೇಳೆ `ಪಾಕಿಸ್ತಾನ್ ಕಿ ಜೈ’ ಎಂಬ ಘೋಷಣೆ ಕೂಗಲಾಗಿದೆ ಎಂದು ಕೆಲವು ಕೀಡಿಗೇಡಿಗಳು ಸುಳ್ಳುಪೋಸ್ಟ್ ಹಂಚಿ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿದ್ದಾರೆ.
ಈ ಕೂಡಲೇ ಇದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಸವೇಶ್ವರನಗರ ಸೈಬರ್ ಕ್ರೈಂ ಠಾಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೂರು ದಾಖಲಿಸಿದ್ದಾರೆ.ರೋಡ್ ಶೋ ವೇಳೆ ಕಾಂಗ್ರೆಸ್ ಅಭಿಮಾನಿಯೊಬ್ಬರು ಬಾಲಕೃಷ್ಣಕಿ ಜೈ, ಡಿ.ಕೆಸುರೇಶ್ ಕಿ ಜೈ, ಹೆಚ್.ಎಂ ರೇವಣ್ಣಕಿ ಜೈ ಎಂದು ಘೋಷಣೆ ಕೂಗಿದ್ದಾರೆ.
ಬಾಲಕೃಷ್ಣಕಿಜೈ, ಎಂದು ಕೂಗಿರುವ ಘೋಷಣೆಯನ್ನು, ಪಾಕಿಸ್ತಾನ್ ಕಿ ಜೈ ಎಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ.ಸುರೇಶ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ದ ಬೇಕೆಂದೇ ಅಪಪ್ರಚಾರ ಮಾಡುತ್ತಾ ಅವರ ಹೆಸರಿಗೆ ಅಪಖ್ಯಾತಿ ತರಲು ಯತ್ನಿಸುತ್ತಿರುತ್ತಾರೆ.
ಹಾಗಾಗಿ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಮತ್ತು ಹೆಚ್ ಸಿ ಬಾಲಕೃಷ್ಣ ರವರು ಫೇಸ್ಬುಕ್ ಲೈವ್ ನಲ್ಲಿ ಲಭ್ಯವಿರುವ
ವಿಡಿಯೋವನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತೋಷ್ ಕುಮಾರ್ ಡಿ. ಸಿ ಮತ್ತು -ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರಾಕೇಶ್ ಒತ್ತಾಯಿಸಿದರು.
ಈ ವೇಳೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಐಎನ್ ಟಿಯುಸಿ ಅಧ್ಯಕ್ಷ ನರಸಿಂಹಮೂರ್ತಿ. ರ, ಹಿರಿಯ ಕಾಂಗ್ರೆಸ್ ಮುಖಂಡ ಪ್ರೇಮಕುಮಾರ್ ಕೆ. ಪಿ.ಸಿ. ಸಿ ಬೆಂಗಳೂರು ನಗರ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ್ ಮತ್ತು ಶಿವಶಂಕರ್, ಕಾಂಗ್ರೆಸ್ ಯುವ ಮುಖಂಡ ಮಧು ಹಾಗೂ ಮತ್ತಿತರರು ಹಾಜರಿದ್ದರು.