ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಸಿನಿಮಾ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕನ್ನಡ ಸಿನಿಮಾಗಳು ಹಿಟ್ ಆಗುತ್ತಿಲ್ಲ, ಚಿತ್ರಮಂದಿರಕ್ಕೆ ಜನ ಬರ್ತಾ ಇಲ್ಲ ಈ ಪರಿಸ್ಥಿತಿಯಲ್ಲೂ ಕರೆಬೇಟೆ 50 ದಿನ ಪೂರೈಸಿರುವುದು ಖುಷಿಯ ವಿಚಾರ. ನಿರ್ದೇಶಕ ರಾಜಗುರು ಮತ್ತು ನಾಯಕ ಗೌರಿಶಂಕರ್ ತುಂಬಾ ಕಷ್ಟಪಟ್ಟು ಇಷ್ಟಪಟ್ಟು ಮಾಡಿದ ಸಿನಿಮಾ ಕೆರೆಬೇಟೆ.
ಈ ಸಿನಿಮಾ ಭಾರಿ ನಿರೀಕ್ಷೆ ಮತ್ತು ಕುತೂಹಲದೊಂದಿಗೆ ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿತ್ತು. ಕುತೂಹಲಕ್ಕೆ ತಕ್ಕಂತೆ ಸಿನಿಮಾ ಕೂಡ ಅದ್ಭುತವಾಗಿ ಮೂಡಿ ಬಂದಿತ್ತು ಆದರೆ ಯಾಕೋ ದೊಡ್ಡಮಟ್ಟದ ಸಕ್ಸಸ್ ಕಾಣಲಿಲ್ಲ. ಈ ಬೇಸರ ಕೂಡಾ ಸಿನಿಮಾ ತಂಡಕ್ಕಿದೆ. ಕಮರ್ಷಿಯಲಿ ದೊಡ್ಡಮಟ್ಟದ ಸಕ್ಸಸ್ ಆಗದಿದ್ದರೂ ಜನರ ಮನ ಗೆದ್ದಿರುವುದು ಸಿನಿಮಾ ತಂಡದ ಶ್ರಮಕ್ಕೆ ಸಿಕ್ಕ ಫಲವಾಗಿದೆ.
ಇದೇ ಖುಷಿಯಲ್ಲಿ ಸಿನಿಮಾ ತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ಸಿನಿಮಾಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಮೊಮೆಂಟುಗಳನ್ನು ಕೊಡುವ ಮೂಲಕ ಸಿನಿಮಾತಂಡ 50 ದಿನ ಪೂರೈಸಿದ ಸಂಭ್ರಮವನ್ನು ಆಚರಿಸಿತು. ಕೆರೆ ಬೇಟೆಯ ಸಂಭ್ರಮಕ್ಕೆ ನಿರ್ದೇಶಕರಾದ ಶಶಾಂಕ್, ದಯಾಳ್ ಪದ್ಮನಾಭ ಮತ್ತು ನಿರ್ಮಾಪಕ ಉದಯ ಮೆಹ್ತ ನಟ ಪ್ರಥಮ್ ಸಾಕ್ಷಿಯಾದರು.
ಈ ವೇಳೆ ಮಾತನಾಡಿದ ನಾಯಕ ಗೌರಿ ಶಂಕರ್ ‘ಸಿನಿಮಾ ಕಮರ್ಷಿಯಲಿ ದೊಡ್ಡ ಮಟ್ಟಕ್ಕೆ ಹಿಟ್ಟಾಗಿಲ್ಲ, ಆದರೆ ಜನ ಒಳ್ಳೆಯ ರಿವ್ಯೂಕೊಟ್ಟಿದ್ದಾರೆ. ಎಲ್ಲೇ ಹೋದರೂ ಕೆರೆಬೇಟೆ ಹೀರೋ ಅಂತ ಗುರುತಿಸುತ್ತಾರೆ. ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ 50 ದಿನಗಳು ಓಡಿದೆ. ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಸಿನಿಮಾ ಇದೆ. ಈ ಖುಷಿಯನ್ನು ನಿಮ್ಮ ಜೊತೆ ಹಂಚಿಕೊಳ್ಳಬೇಕು ಎನ್ನುವ ಕಾರಣಕ್ಕೆ ಐವತ್ತು ದಿನದ ಸಂಭ್ರಮವನ್ನು ಇಟ್ಟುಕೊಂಡಿದ್ದೇವೆ. ಕೆರೆಬೇಟೆ ಸಿನಿಮಾ ನನಗೆ ದೊಡ್ಡ ಕನಸಾಗಿತ್ತು ಎಂದು ತಿಳಿಸಿದರು.