ಹುಬ್ಬಳ್ಳಿ/ಶಿವಮೊಗ್ಗ: ಈ ಭಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಮುಂದಿದೆ ಎಂದು ನೀಡಿರುವ ವರದಿಗಳ ಪ್ರಕಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿ, ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್ ಪರವೇ ಹೇಳಿದ್ದವು.
ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರಖುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು.
ನನ್ನ ವಿರುದ್ಧ ಷಡ್ಯಂತರ, ಅಪಪ್ರಚಾರ ಮಾಡಿದರೂ ನಿನ್ನೆಗೆ ಮುಗಿದಿದೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ. ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ.
ಅತಂತ್ರ ಎಂಬ ಪ್ರಶ್ನೆ ಉತ್ತರ ನೀಡಲ್ಲ. ನಾನು 150 ಅಂತ ಎಲ್ಲೂ ಹೇಳಿಲ್ಲ ಆದರೆ ಬಹುಮತ ಅಂತ ಹೇಳಿದ್ದೆ ಈಗಲೂ ಅದೇ ಹೇಳಿಕೆ ಬದ್ಧನಾಗಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ತಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ, ನಾವೇ ಗೆಲ್ತೇವೆ. ಕರ್ನಾಟಕ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರುತ್ತೆ, ಸರ್ಕಾರ ರಚನೆ ಮಾಡ್ತೀವಿ. ಬಿಜೆಪಿಗೆ 115ರಿಂದ 117 ಸ್ಥಾನ ಬಂದೇ ಬರುತ್ತದೆ. ಜೆಡಿಎಸ್ ಜೊತೆ ಯಾವುದೇ ಮಾತುಕತೆ ಆಗಿಲ್ಲ ಎಂದಿದ್ದಾರೆ.
Leave a Review