ರಾಜ್ಯ ಸಂಚಾರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್” . ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ
ಶೀರ್ಷಿಕೆಯಾಗಿದೆ. ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್  ಕಲ್ಲೂರ್ ನಿರ್ಮಿಸಿರುವ, ಪ್ರತಾಪ್ ಗಂಧರ್ವ ನಿರ್ದೇಶನದ, ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ನಟ ರಕ್ಷಿತ್ ನಾಗ್ ನಾಯಕನಾಗಿ ಹಾಗೂ ಸಂಜನ್ ದಾಸ್ ನಾಯಕಿಯರಾಗಿ ನಟಿಸಿರುವ “Congratulations ಬ್ರದರ್” ಚಿತ್ರ ನವೆಂಬರ್
೨೧ಕ್ಕೆ ಬಿಡುಗಡೆಯಾಗುತ್ತಿದೆ.
ಅದಕ್ಕೂ ಮುನ್ನ ಚಿತ್ರತಂಡ ವಿನೂತನ ಪ್ರಚಾರಕ್ಕೆ ಮುಂದಾಗಿದೆ. ಬೀದರ್ ನಿಂದ ಚಾಮರಾಜನಗರದವರೆಗೂ ಚಿತ್ರತಂಡ
ಕರ್ನಾಟಕದ ಪ್ರತೀ ಜಿಲ್ಲೆಗೂ ಭೇಟಿ ನೀಡಿ ಜನರಿಗೆ ಚಿತ್ರದ ಬಗ್ಗೆ ಮಾಹಿತಿ ನೀಡಲಿದೆ. ನಿರ್ಮಾಪಕ ಪ್ರಶಾಂತ್ ಕಲ್ಲೂರ್, ಸಹ ನಿರ್ಮಾಪಕ ಹರೀಶ್
ರೆಡ್ಡಿ, ನಾಯಕ ರಕ್ಷಿತ್ ನಾಗ್, ನಾಯಕಿಯರಾದ ಸಂಜನದಾಸ್, ಅನೂಷ, ಕಲಾವಿದ ರಕ್ಷಿತ್ ಕಾಪು, ಸುದರ್ಶನ್, ಚೇತನ್ ದುರ್ಗ ಇದ್ದರು.


 
		 
		 
		
 
		
 
    