ಕಲಬುರಗಿ: ಚುನಾವಣೆಗೂ ಮೊದಲೇ ಕಾಂಗ್ರೆಸ್ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿ ಇಲ್ಲಿ ಅವರ ಮಗ ಪ್ರಿಯಾಂಕ ಖರ್ಗೆ ಸಚಿವರಾಗಿದ್ದಾರೆ. ಇಲ್ಲಿಂದ ಸ್ಪರ್ಧಿಸದೆ ಖರ್ಗೆ ಪಲಾಯನ ಮಾಡಿದ್ದಾರೆ.
ಅದೇ ರೀತಿಯಾಗಿ ಮುಖ್ಯಮಂತ್ರಿ ತವರು ಮೈಸೂರಿನಿಂದಲೂ ಸಹ ಅವರ ಪುತ್ರ ಸ್ಪರ್ಧಿಸಿಲ್ಲ. ಹಾಗಾಗಿ ಕಾಂಗ್ರೆಸ್ ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡಾಗಿದೆ ಎಂದು ಅವರು ತಿಳಿಸಿದ್ದಾರೆ.ಪಕ್ಷದ ಮುಖಂಡ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಪಕ್ಷ ತ್ಯಜಿಸುವುದಿಲ್ಲಿ ಎಂದು ಇದೇ ಸಂದರ್ಭದಲ್ಲಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.