ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದರೂ, ಈ ವರ್ಷ ಬ್ರಿಕ್ಸ್ ಅಧ್ಯಕ್ಷತೆ ವಹಿಸಿರುವ ಭಾರತವು ಯಾಕೆ ಇನ್ನೂ ಶೃಂಗಸಭೆಯನ್ನು ಮುಂಚಿತವಾಗಿ ಆಯೋಜಿಸಿ ರಾಜತಾಂತ್ರಿಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಈ ಕುರಿತು ಎಕ್ಸ್ (ಘಿ) ಖಾತೆಯಲ್ಲಿ ಕಿಡಿಕಾರಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪ್ರಧಾನಿ ಮೋದಿಯವರ `ವಿಶ್ವಗುರು’ ಹಣೆಪಟ್ಟಿಯನ್ನು ಲೇವಡಿ ಮಾಡಿದ್ದಾರಲ್ಲದೆ, ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಎದುರಿಸಲು ಮೋದಿ ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
18ನೇ ಬ್ರಿಕ್ಸ್ ಶೃಂಗಸಭೆಯು ಈ ವರ್ಷ ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಬೇಕಿದೆ.
ಬ್ರಿಕ್ಸ್ ಶೃಂಗಸಭೆ ಆಯೋಜಿಸಿ ಶಾಂತಿ ಸ್ಥಾಪಿಸಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಆಗ್ರಹ



