ತಿಪಟೂರು: ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ತಾಲೂಕಿನ ಶಾಸಕರು ನನಗೆ ಮತ್ತು ನನ್ನ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಕೊಡುತ್ತಿಲ್ಲವೆಂದು ಮತ್ತು ಪಕ್ಷದ ವರಿಷ್ಠರು ನಮ್ಮ ಮಾತಿಗೆ ಬೆಲೆ ಕೊಡುವುದರ ಜೊತೆಗೆ ಸ್ಪಂದಿಸುತ್ತಿಲ್ಲ ಹಾಗಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು ನಮ್ಮ ಕಾರ್ಯಕರ್ತರ ಬೇಡಿಕೆಗಳನ್ನ ಈಡೇರಿಸದಿದ್ದರೆ ಲೋಕಸಭಾ ಚುನಾವಣೆಯ ಪ್ರಚಾರದಿಂದ ದೂರ ಉಳಿದು ತಟಸ್ಥರಾಗಿ ಮತ ಚಲಾಯಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ತಿಳಿಸಿದರು.
ನಗರದ ಕೌಸ್ತುಭ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ವೇಶಿಸಿ ಮಾತನಾಡಿದ ಲೋಕೇಶ್ವರ್ ಅವರು ನಾನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ಸಂಘಟನೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಷಡಕ್ಷರಿ ರವರ ಗೆಲುವಿಗೆ ಕಾರಣನಾಗಿದ್ದೇನೆ.
ಚುನಾವಣೆಯ ನಂತರ ಪಕ್ಷದ ವರಿಷ್ಠರು ಹಾಗೂ ಶಾಸಕ ಕೆ .ಷಡಕ್ಷರಿ ರವರು ನನನ್ನು ಹಾಗೂ ನಮ್ಮ ಅಭಿಮಾನಗಳಿಗೆ ಸೂಕ್ತ ಸ್ಥಾನಮಾನ ನೀಡದೆ ನಿರ್ಲಕ್ಷ ವಹಿಸಿದ್ದಾರೆಕಾಂಗ್ರೆಸ್ ಪಕ್ಷದ ವರಿಷ್ಠರು ನಮ್ಮನ್ನ ಗೌರವಿತವಾಗಿ ನಡೆಸಿಕೊಂಡರೆ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ ಒಂದು ವೇಳೆ ನಿರ್ಲಕ್ಷ ಮಾಡಿದರೆ ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ತಟಸ್ಥವಾಗಿರುತ್ತೇವೆ.
ನಾನು ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೋಗಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ಬಿಜೆಪಿಯ ಕೆಲ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾಗಿ ಬಿಜೆಪಿ ಬೆಳವಣಿಗೆಗಳ ಬಗ್ಗೆ ಚರ್ಚಿಸಿರುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ನಾನು ಯಾವುದೇ ಕಾರಣಕ್ಕೂ ಆ ವಿಚಾರದಲ್ಲಿ ಮಾತನಾಡಿಲ್ಲ. ನನಗೆ ಹಾಗೂ ನಮ್ಮ ಅಭಿಮಾನಿಗಳಿಗೆ ಸೂಕ್ತ ಸ್ಥಾನಮಾನ ನೀಡಿದರೆ ತುಮಕೂರು ಲೋಕಸಭಾ ಅಭ್ಯಾರ್ಥಿ ಎಸ್.ಪಿ ಮುದ್ದುಹನುಮೇಗೌಡರ ಪರವಾಗಿ ಕೆಲಸ ಮಾಡುತ್ತೇವೆ.
ಮುದ್ದುಹನುಮೇಗೌಡರು ಸರಳ ಹಾಗೂ ಸಜ್ಜನ ರಾಜಕಾರಣಿ ಅವರಿಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.ಪತ್ರಿಕಾ ಘೋಷ್ಠಿಯಲ್ಲಿ ಮಾಜಿ ನಗರಸಭಾ ಉಪಾಧ್ಯಕ್ಷ ಸೊಪ್ಪು ಗಣೇಶ್ ಎಪಿಎಂಸಿ ನಿರ್ದೇಶಕ ಬಸವರಾಜು, ಭಾಗ್ಯ ಮಂಜುನಾಥ್, ಮಹೇಶ್ವರಪ್ಪ, ಪಂಚವಟಿ ಶಿವಶಂಕರ್, ವನಿತಾ ಪ್ರಸನ್ನ ಕುಮಾರ್, ಕಾಂಗ್ರೆಸ್ಸಿನ ಕಾರ್ಯಕರ್ತರು ಉಪಸ್ಥಿತರಿದರು.