ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರನ್ನು ಕಡೆಗಣಿಸಿ ಹೊರಗಿನವರಿಗೆ ಮಣೆ ಹಾಕುವ ಪ್ರವೃತ್ತಿ ಜಾಸ್ತಿಯಾಗುತ್ತಿದ್ದು. ಹೊರಗಿನವರಿಂದ ಪಕ್ಷ ನಿಷ್ಠೆ ನೀರಿಕ್ಷಿಸಲು ಸಾಧ್ಯವಿಲ್ಲ ಇದಕ್ಕೆ ಉದಾಹರಣೆ ಜಗದೀಶ್ ಶೆಟ್ಟರ್ ಎಂದು ಬೆಂಗಳೂರು ಕೇಂದ್ರ ವಿಭಾಗದ ವಿದ್ಯಾರ್ಥಿ ಕಾಂಗ್ರೆಸ್ (ಎನ್ ಎಸ್ ಯು ಐ) ಉಪಾಧ್ಯಕ್ಷ ಪ್ರೇಮ್ ಕುಮಾರ್.ಡಿ ಅಸಮದಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋತ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತು, ಆದರೆ ಅವರು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದು ಪುನ: ಬಿಜೆಪಿ ಸೇರಿದ್ದಾರೆ ಈ ಬೆಳವಣಿಗೆಯಿಂದ ಹಿರಿಯ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಪ್ರೇಮ್ ಕುಮಾರ್.ಡಿ. ಹೇಳಿದ್ದಾರೆ.
ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಗಲು ರಾತ್ರಿ ಅವಿರತವಾಗಿ ಶ್ರಮಿಸುತ್ತಿರುವ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಇದರಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಸಮಾದಾನವಾಗಿದೆ ಎಂದ ಪ್ರೇಮ ಕುಮಾರ್ ಪಕ್ಷದ ನಾಯಕರು ಹೊರಗಿನವರಿಗೆ ಮಣೆ ಹಾಕುವ ಬದಲು ಪಕ್ಷ ಸಂಘಟನೆಯಲ್ಲಿ ತೋಡಗಿಸಿಕೊಂಡ ನಿಷ್ಠಾವಂತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.