ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ಸಂಜೆ 7 ಗಂಟೆಗೆ ಖಾಸಗಿ ಹೋಟೆಲ್ಯಲಿರುವ ಸಭೆಯಲ್ಲಿ ಉಪಚುನಾವಣೆ ಗೆಲುವಿನ ಬಗ್ಗೆ ಸಮಾಲೋಚನೆ ನಡೆಸಲಿದ್ದು, ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡೂ ಕ್ಷೇತ್ರಗಳ ಗೆಲುವಿನ ಕುರಿತು ಚರ್ಚೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಎಲ್ಲಾ ಸಚಿವರಿಗೆ ಜವಾಬ್ದಾರಿ ನೀಡಲಿದ್ದು, ಜೊತೆಗೆ ಅಧಿವೇಶನ ಮುಗಿಯುತ್ತಿದ್ದಂತೆ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವಂತೆ ಶಾಸಕರಿಗೆ ಸೂಚಿಸಲಿದ್ದಾರೆ. ಉಪಚುನಾವಣೆ ಬಳಿಕ ಎದುರಾಗುವ ಜಿಬಿಎ, ಜಿಪಂ, ತಾಪಂ ಹಾಗೂ ಗ್ರಾ.ಪಂ ಚುನಾವಣೆಗೂ ಸಜ್ಜಾಗುವಂತೆ ಕರೆ ನೀಡಲಿದ್ದಾರೆ.



