ಚಿತ್ರದುರ್ಗ : ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರಾಜೀನಾಮೆ ಕೇಳುತ್ತಿದ್ದಾರೆ. ಈ ವಿಚಾರವಾಗಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರ ಮೇಲೆ ಪ್ರೀತಿ ಇರುವುದಕ್ಕೆ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಪ್ರಜೆಗಳು ವಿರುದ್ಧ ಕಾಂಗ್ರೆಸ್ ನಾಯಕರು ಮಾತಾಡಲ್ಲ ಉಗ್ರರ ಮೇಲೆ ಪ್ರೀತಿ ಇರುವ ಕಾರಣಕ್ಕೆ ಕಾಂಗ್ರೆಸ್ಸಿಗರು ಮಾತನಾಡಲ್ಲ. ನಿಮ್ಮ ಬೆಂಬಲ ಉಗ್ರರಿಗೋ ಪಾಕಿಸ್ತಾನಕ್ಕೂ ಎಂಬುದು ಸ್ಪಷ್ಟಪಡಿಸಿ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.



