ಕೆ.ಆರ್.ಪುರ: ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಪೂರಕ ವಾತಾವರಣವಿತ್ತು ಆದರೆ ಮಾಜಿ ಶಾಸಕ ನಂದೀಶ್ ರೆಡ್ಡಿ ಕಾಂಗ್ರೆಸ್ ಗೆ ಬರುತ್ತಾರೆ ಎನ್ನುವ ಗೊಂದಲದಿಂದಾಗಿ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಮೋಹನ್ ಅಸಮಾಧಾನ ವ್ಯಕ್ತಪಡಿಸಿದರು.
ಕೆ.ಆರ್.ಪುರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಆತ್ಮವಲೋಕನ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಕಾಂಗ್ರೆಸ್ ನ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನನ್ನನ್ನು ಕೂರಿಸಿಕೊಂಡು ನಂದೀಶ್ ರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಕಣದಿಂದ ಹಿಂದೆ ಸರಿಯುವಂತೆ ಮನವೊಲಿಸಿದ್ದರು. ಆದರೆ ನಂದೀಶ್ ರೆಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬಾರದೆ ಇರುವುದರಿಂದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಿದ್ದರು.
ಅನಿವಾರ್ಯವಾಗಿ ಸ್ಪರ್ಧೆ ಮಾಡಬೇಕಾಗಿ ಬಂದಿದ್ದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳಲ್ಲಿ ಪರಭಾವಗೊಂಡಿದ್ದೇನೆ ಎಂದರು.ಅಕ್ಟೋಬರ್ ನಲ್ಲಿ ವಿಧಾನ ಸಭಾ ಚುನಾವಣೆಗೆ ತಯಾರಿ ಮಾಡಿಕೊಂಡು ಜನರ ಮಧ್ಯೆ ನಿಂತು ಎಲ್ಲಾ ರೀತಿಯ ಕೆಲಸ ಮಾಡುತ್ತ ಬಂದಿದ್ದೆ ನಮ್ಮಲ್ಲಿದ್ದ ಗೊಂದಲದಿಂದಾಗಿ ಬ್ಲಾಕ್ ಅಧ್ಯಕ್ಷರು ಯಾರಿಗೆ ಬೆಂಬಲ ಸೂಚಿಸುವುದು ಎನ್ನುವುದು ಗೊತ್ತಾಗಿರಲಿಲ್ಲ ಎಂದರು.
ರಾಜ್ಯದಲ್ಲಿ ನಮ್ಮದೇ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದರಿಂದ ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿಯತ್ತ ಕ್ಷೇತ್ರವನ್ನು ಕೊಂಡೊಯ್ಯಲು ಶ್ರಮಿಸುವುದು. ಮುಂಬರುವ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ನಮ್ಮಲ್ಲೇ ಆದ ನ್ಯೂನ್ಯತೆಗಳಿಂದ ಈ ಕ್ಷೇತ್ರದಲ್ಲಿ ಸೋಲು ಉಂಟಾಯಿತು. ಕಾಂಗ್ರೆಸ್ ಪಕ್ಷ ಆಲದ ಮರ ಇದ್ದಂತೆ , ಕಾಂಗ್ರೆಸ್ ನಿಂದ ನಾವು ಹೊರತು ನಮ್ಮಿಂದ ಕಾಂಗ್ರೆಸ್ ಅಲ್ಲ, ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಗೆ ನಿಲ್ಲುವ ಹಂಬಲ ಹೊಂದಿದ್ದೇನೆ ಪಕ್ಷ ಅವಕಾಶ ನೀಡಿದರೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮುಖಂಡ ಡಿ.ಎ.ಗೋಪಾಲ್ ಮಾತನಾಡಿ, ಹೊರಮಾವು ವಾರ್ಡ್ ನಲ್ಲಿ ಓಟರ್ ಲಿಸ್ಟ್ ಚೆಕ್ ಮಾಡಿಸುವ ಅವಶ್ಯಕತೆ ಇದೆ ನಮ್ಮ ಕಾರ್ಯಕರ್ತರು ಮುಖಂಡರು ಈ ಬಗ್ಗೆ ಗಮನಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಾರಾಯಣಸ್ವಾಮಿ, ಬ್ಲಾಕ್ ಅಧ್ಯಕ್ಷರಾದ ಸಿ.ವೆಂಕಟೇಶ್, ಮಹಿಳಾ ಅಧ್ಯಕ್ಷೆ ಸಾಕಮ್ಮ, ಮುಖಂಡರಾದ ಅಗರ ಪ್ರಕಾಶ್, ಗಗನ್, ಸುನೀಲ್ ಆಂಜಿನಪ್ಪ, ಹಂಸರಾಜ್ ಮತ್ತಿತರರಿದ್ದರು.
Leave a Review