ರಾಮನಗರ: ವಿಧಾನ ಪರಿಷತ್ 3 ಪದವೀಧರ ಕ್ಷೇತ್ರ ಹಾಗೂ 3 ಶಿಕ್ಷಕರ ಕ್ಷೇತ್ರದ ಒಟ್ಟು ವಿಧಾನ ಪರಿಷತ್ನ 6 ಸ್ಥಾನಗಳಿಗೆ ಚುನಾವಣೆ 2024 ರ ಜೂನ 3 ರಂದು ಜರುಗಲಿದ್ದು, ಕಾಂಗ್ರೆಸ್ ಪಕ್ಷ 6 ತಿಂಗಳ ಮೊದಲೆ ಅಭ್ಯರ್ಥಿಗಳ ಘೋಷಣೆ ಮಾಡಿದ್ದು ಬಹಳಷ್ಟು ಅನಕೂಲವಾಗಿದೆ ಎಂದು ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಪದವೀಧರ ಮತದಾರರು ಶಿಕ್ಷಕರು ಸರ್ಕಾರದ ಉತ್ತಮ ಸಾಧನೆ ಒಳ್ಳೆಯ ಆಡಳಿತವನ್ನು ನೀಡಿದ್ದನ್ನು ಪರಿಗಣಿಸಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ತಿನ 6 ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ವಿಶ್ವಾಸ ನಮ್ಮದಾಗಿದೆ.
ನಮ್ಮ 5 ಗ್ಯಾರಂಟಿಗಳಲ್ಲಿ ಪದವೀಧರರ ಯೋಜನೆಯಾದ ಯುವ ನಿಧಿಯು ಒಂದಾಗಿದ್ದು ಪದವೀದರರಿಗೆ ಆಶಾಕಿರಣವಾಗಿದೆ. ಹಾಗೂ ಸರಕಾರಿ ಶಾಲೆಗಳಿಗೆ 11494 ಶಿಕ್ಷಕರ ನೇಮಕ 35 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. 2162 ಸರಕಾರಿ ಶಾಲೆಗಳ 73 42 ಕೊಠಡಿಗಳ ದುರಸ್ತಿಗೆ 70 ಕೋಟಿ ಅನುದಾನ ನೀಡಲಾಗಿದೆ. 58 ಲಕ್ಷ ವಿದ್ಯಾರ್ಥಿಗಳಿಗೆ 280 ಕೋಟಿ ಕೋಟಿ ವೆಚ್ಚದಲ್ಲಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗಿದೆ. ಸರಕಾರಿ ಶಾಲೆಯ 45 ಲಕ್ಷ ಮಕ್ಕಳಿಗೆ 143 ಕೋಟಿ ವೆಚ್ಚದಲ್ಲಿ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗಿದೆ.
ಅತ್ಯುತ್ತಮ ಸಾಧನೆ ಮಾಡಿದ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷದಂತೆ ಒಟ್ಟು 350 ಕೋಟಿ ಅನುದಾನ ನೀಡಲಾಗಿದೆ. ಅತಿಥಿ ಉಪನ್ಯಾಸಕರುಗಳಿಗೆ ಕನಿಷ್ಟ 5 ಸಾವಿರ ರೂಪಾಯಿಗಳಿಂದ ಗರಿಷ್ಠ 8 ಸಾವಿರ ರೂಪಾಯಿ ವೇತನ ಹೆಚ್ಚಳ ಮಾಡಲಾಗಿದೆ. ಅತಿಥಿ ಉಪನ್ಯಾಸಕರುಗಳಿಗೆ ರಜೆಯ ಸೌಲಭ್ಯ ನೀಡಲಾಗಿದೆ. 5 ಲಕ್ಷ ರೂಪಾಯಿ ವೈದ್ಯಕೀಯ ಸೌಲಭ್ಯ ಹಾಗೂ 60 ವರ್ಷದ ನಂತರ ನಿವೃತ್ತಿಯಾಗುವ ಸಂದರ್ಭದಲ್ಲಿ ಬರಿಗೈಯಿಂದ ಕಳುಹಿಸದೇ 5 ಲಕ್ಷ ರೂಪಾಯಿ ಇಡಿ ಗಂಟು ನೀಡಲಾಗುವುದು. 19 ಸಾವಿರ ಓPS ಯೋಜನೆಯಲ್ಲಿದ್ದ ನೌಕರರನ್ನು ಔPS ವ್ಯಾಪ್ತಿಗೆ ಒಳಪಡಿಸಲಾಗಿದೆ.
ಶಿಕ್ಷಕರ ಕೋರಿಕೆಯ ಮೇರೆಗೆ 29 ಸಾವಿರ ಶಿಕ್ಷಕರುಗಳಿಗೆ ಅವರು ಬಯಸಿದ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡಿದ ಕ್ಷಣಾರ್ಧದಲ್ಲಿ ರಾಜ್ಯದ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಓಇP ಬದಲು SಇP ಜಾರಿಗೆ ತರಲು ಸಮಿತಿ ರಚಿಸಲಾಗಿದೆ.
ರಾಜ್ಯದ ಶಿಕ್ಷಕರ ಹಾಗೂ ಪದವೀಧರರ ಕಲ್ಯಾಣಕ್ಕಾಗಿ ಇನ್ನೂ ಹಲವಾರು ಯೋಜನೆಗಳ ಜಾರಿಗಾಗಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ರದ ಮತ ನೀಡಿ ಪ್ರಚಂಡ ಬಹುಮತದಿಂದ ಆಯ್ಕೆಮಾಡಬೇಕೆಂದು ಪದವೀಧರ ಮತದಾರರಲ್ಲಿ, ಶಿಕ್ಷಕ ಬಂಧು ಭಗಿನಿಯರಲ್ಲಿ ಮನವಿ ಮಾಡಿದರು.
ಸದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿಕ್ಷಕ ಘಟಕದ ಜಿಲ್ಲಾಧ್ಯಕ್ಷ ಆರ್.ಕೆ.ಬೈರಲಿಂಗಯ್ಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಅನುದಾನ ರಹಿತ ಖಾಸಗಿ ಶಾಲೆಗಳ ಗೌರವಾಧ್ಯಕ್ಷ ಪಟೇಲ್ ರಾಜು, ಮತ್ತಿತರರು ಇದ್ದರು.