ದೆಹಲಿ: ಪ್ರಧಾನಿ ಮೋದಿ ಅವರಿಂದ ಕಾಂಗ್ರೆಸ್ ವಿರುದ್ಧ ಷಡ್ಯಂತರ ನಡೆಯುತ್ತಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ವರಿಷ್ಠರು ಆರೋಪಿಸಿದ್ದಾರೆ.ದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಮತ್ತಿತರರು ಮಾತನಾಡಿ, ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ.
ನಮ್ಮ 250 ಕೋಟಿ ರೂಪಾಯಿ ಹಣವನ್ನು ಚುನಾವಣಾ ಪ್ರಚಾರಕ್ಕಾಗಿ ಖರ್ಚು ಮಾಡಲಾಗುತ್ತಿಲ್ಲ. ನಮ್ಮ ಪ್ರಚಾರಕ್ಕಾಗಿಮಾಧ್ಯಮಗಳಲ್ಲಿ ಜಾಹೀರಾತು ನೀಡಬೇಕಾಗಿದೆ. ಬ್ಯಾಂಕಿನ ಖಾತೆಯಲ್ಲಿರುವ ಹಣವನ್ನು ಡ್ರಾ ಮಾಡಲಾಗುತ್ತಿಲ್ಲ. ವಿಪಕ್ಷಗಳನ್ನು ದುರ್ಬಲಗೊಳಿಸುವ ಯತ್ನ ಮಾಡಲಾಗುತ್ತಿದೆ. ಚುನಾವಣಾ ಬಾಂಡ್ಗಳಿಂದ ಬಿಜೆಪಿಯ ಖಜಾನೆ ತುಂಬಿದೆ.
ಯಾವ ಪಕ್ಷಕ್ಕೂ ಇಲ್ಲದ ನಿಯಮ ಕಾಂಗ್ರೆಸ್ಗೆ ಮಾಡಲಾಗಿದೆ. ಚುನಾವಣಾ ಬಾಂಡ್ಗಳು ಅಕ್ರಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಕೇಂದ್ರ ಚುನಾವಣಾ ಆಯೋಗ ಐಟಿ, ಇಡಿ, ಸಿಬಿಐಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
31 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಕಾಂಗ್ರೆಸ್ನ ಬ್ಯಾಂಕ್ ಅಕೌಂಟ್ ಸೀಜ್ ಮಾಡಲಾಗಿದೆ. ಯಾವ ಪಕ್ಷಕ್ಕೂ ಇಲ್ಲದ ನಿಯಮ ಕಾಂಗ್ರೆಸ್ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಅನಿವಾರ್ಯ ಪರಿಸ್ಥಿತಿ ಹೀಗೆ ಮುಂದುವರಿದರೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುವುದು ಅಸಾಧ್ಯತೆ ಮಾತು.
ಚುನಾವಣಾ ಬಾಂಡ್ಗಳಿಂದ ಬಿಜೆಪಿಗೆ ಶೇ. 56, ಕಾಂಗ್ರೆಸ್ಗೆ ಶೇ. 11ರಷ್ಟು ಸಗ್ರಹವಾಗಿದೆ. ಸಾಂವಿಧಾನಿಕ ಸಂಸ್ಥೆಗಳಿಗೆ ನಾವು ಮನವಿ ಮಾಡುತ್ತೇವೆ. ಆದಷ್ಟೂ ಬೇಗ ನಮ್ಮ ಬ್ಯಾಂಕ್ ಖಾತೆಗಳನ್ನು ರಿಲೀಸ್ ಮಾಡಿ ಎಂದು ಮನವಿ ಹೇಳಿದ್ದಾರೆ.ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸುತ್ತಿದೆ. ಆದಷ್ಟೂ ಬೇಗ ಸತ್ಯ ಹೊರಬರಲಿದೆ ಎಂದಿದ್ದಾರೆ.