ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದುರಾಡಳಿತ ಇದೀಗ ಹೊಸ ರೂಪವೊಂದನ್ನು ಪಡೆದುಕೊಳ್ಳುತ್ತಿದೆ. ಸಾಲದ ಕೂಪದಲ್ಲೇ ಮುಳುಗಿದ ನಂತರ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸೋದಕ್ಕೆ ಹಣವಿಲ್ಲ ಎನ್ನುವ ತನ್ನ ವೈಫಲ್ಯ ಮುಚ್ಚಿಹಾಕಲು ಕಾನೂನು ಸುವ್ಯವಸ್ಥೆಯ ನಡುವೆ ಸಂಘರ್ಷ ಹುಟ್ಟುಹಾಕಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ಹೆಣೆಯುತ್ತಿದೆ ಎಂದು ಕೇಂದ್ರ ಸಚಿವ ಶೋಭಾಕರಂದ್ಲಾಜೆ ಆರೋಪಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ, ಶಾಲಾ ಆವರಣದಲ್ಲಿ ಹಿಜಾಬ್ ಬಳಕೆಗೆ ನಿಷೇಧ ಹೇರಲಾಗಿತ್ತು. ಈ ನಿಷೇಧವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಎತ್ತಿ ಹಿಡಿದು, ಹಿಜಾಬ್ ನಿಷೇಧಿಸಿತ್ತು.
ವೈಫಲ್ಯ ಮುಚ್ಚಿಹಾಕಲು ಕಾಂಗ್ರೆಸ್ನಿಂದ ಷಡ್ಯಂತ್ರ: ಶೋಭಾ



