ಯಲಹಂಕ: ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರುಗೆರೆ, ಆಲೂರು, ತಮ್ಮೇನಹಳ್ಳಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವು ಯಶಸ್ವಿಯಾಗಿ ನೆರವೇರಿತು.
ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಮಂಜುನಾಥ್ ಉಪಾಧ್ಯಕ್ಷೆ ಪದ್ಮಾವತಿ ಪಿಡಿಒ ಗಿರೀಶ್ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದು ಅದ್ದೂರಿ ಮೆರವಣಿಗೆ ಮೂಲಕ ರಥವನ್ನು ಬೀಳ್ಕೊಟ್ಟರು.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನೆರೆದಿದ್ದ ಸಾರ್ವಜನಿಕರಿಗೆ ದಲಿತ ಪರ ಮುಖಂಡರಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಕಾರ್ಯನಿಮಿತ್ತ ತೆರಳುತ್ತಿದ್ದ ಶಾಸಕ ಎಸ್ ಆರ್ ವಿಶ್ವನಾಥ್ ಸ್ಥಳಕ್ಕೆ ಆಗಮಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುದುರುಗೆರೆ ಮಂಜುನಾಥ್, ರಂಗನಾಥ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಿರೀಶ್ ಪಂಚಾಯಿತಿ ಆಡಳಿತ ಸಿಬ್ಬಂದಿ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಭಾಗವಹಿಸಿದ್ದರು.