ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗೂ ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಂಗಳವಾರವೂ ಸಂಸತ್ತಿಗೆ ಮೆರವಣಿಗೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ. ಮುಂದಿನ ಮೆರವಣಿಗೆ ಕುರಿತು ಸಭೆ ಇನ್ನೂ ನಡೆಯುತ್ತಿದೆ. ಮುಂದಿನ ಕ್ರಮವನ್ನು ವಿವರಿಸುವ ಅಧಿಕೃತ ಹೇಳಿಕೆಯನ್ನು ಪಕ್ಷ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಹೇಳಿದರು.



