ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಬಾಕಿ ಬಿಲ್ ಮೊತ್ತವನ್ನು ಶೀಘ್ರದಲ್ಲಿಯೇ ಪಾವತಿಸಬೇಕು ಎಂದು ಗುತ್ತಿಗೆದಾರರ ಸಂಘದ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಬಾಕಿಯಿರುವ ಬಿಲ್ ಮೊತ್ತವನ್ನು ಜೂ.5ರೊಳಗಾಗಿ ಪಾವತಿಸಬೇಕು. ಇಲ್ಲವಾದಲ್ಲಿ ಕಾಮಗಾರಿಗಳ ಸ್ಥಗಿತಗೊಳಿಸುವುದಾಗಿ ಮನವಿಯಲ್ಲಿ ಗಡುವು ನೀಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿರುವ ಕಾಮಗಾರಿಗಳ ಸುಮಾರು 2500ರಿಂದ 3000 ಕೋಟಿ ರೂ.ಗಳಷ್ಟು ಬಾಕಿ ಬಿಲ್ ಮೊತ್ತ ಬರಬೇಕಾಗಿದೆ. ಈ ಹಣವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿರುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ತಿಳಿಸಿದ್ದಾರೆ.
Leave a Review