ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ಕೊಡುಗು ಜಿಲ್ಲೆಯ ಕುಶಾಲ್ನಗರದಲ್ಲಿ ತಿಳಿಸಿದ್ದಾರೆ.
ಕೊರೊನಾ ಬಗ್ಗೆ ಈಗಾಗಲೇ ಇಲಾಖೆ ವತಿಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ.
ಕೇರಳ ರಾಜ್ಯದ ಗಡಿ ಭಾಗದಲ್ಲಿ ಬಂದು ಹೋಗುವವರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟು ಹಾಗೂ ಹೃದಯ ಸಮಸ್ಯೆಗಳು ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸಲಹೆ ಮಾಡಲಾಗಿದೆ.
ಆಸ್ಪತ್ರೆಗಳಲ್ಲಿನ ಹಾಸಿಗೆ, ಔಷಧಿ, ಆಕ್ಸಿಜನ್ ಸಿದ್ಧತೆ ಮಾಡಿಟ್ಟುಕೊಳ್ಳಲು ಹೇಳಲಾಗಿದೆ. ಕೊರೊನಾಗಾಗಿ ಮೀಸಲಿಟ್ಟಿರುವ ಹಾಸಿಗೆಗಳನ್ನು ಪರಿಶೀಲಿಸಲು ಸಹ ಹೇಳಲಾಗಿದೆ.ಒಟ್ಟಾರೆ ಜನತೆ ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಸಚಿವರು ಅಭಯ ನೀಡಿದ್ದಾರೆ.