ಬೆಂಗಳೂರು: ಐಪಿಎಲ್ ಪಂದ್ಯಾವಳಿಗಳಿಗೆ ಆಡಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಸಂಬAಧ ಮೈದಾನದ ಭದ್ರತೆ ಪರಿಶೀಲನೆ ನಡೆದದೆ. ಈ ತಿಂಗಳ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದುದರ್ಘಟನೆ ನಂತರ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯ ನಡೆಯಲಿರುವುದರಿಂದ ಮೈದಾನದ ಭದ್ರತೆಗೆ ತೀವ್ರ ಒತ್ತು ನೀಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಜಂಟಿ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಇಂದು ಭದ್ರತಾ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.



