ಬೆಂಗಳೂರು: ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳಲಾಗಿದೆ.ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಮತದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಯಿಂದ ಗೆದ್ದಿದ್ದರೂ ಗೆದ್ದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಸೋಮಶೇಖರ್ ಇಂದು ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತಚಲಾಯಿಸುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಮತದಾನಕ್ಕೆ ತೆರಳುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕ್ಷೇತ್ರದ ಅಭಿವೃದ್ಧಿನೆರವಿಗೆ ಯಾರು ಬಂದಿದ್ದಾರೋ ಅವರಿಗೆ ನಾನು ಮತಚಲಾಯಿಸುತ್ತೇನೆ ಎಂದು ತಿಳಿಸಿದ್ದ ಅವರು ಮತದಾನದ ನಂತರ ಆತ್ಮಸಾಕ್ಷಿ ಮತ ನೀಡಿದ್ದೇನೆ ಎಂದು ಹೇಳಿದ್ದಾರೆ.ಸೋಮಶೇಖರ್ ಅವರ ನಡೆಯಿಂದಾಗಿ ಜೆಡಿಎಸ್ ಬಿಜೆಪಿ ನಾಯಕರಲ್ಲಿ ದಿಗ್ಭ್ರಮೆಯುಂಟು ಮಾಡಿದೆ.