ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ವಿಷಯ ತಿಳಿಸುವ ಚಿತ್ರದ ಪೊಸ್ಟರ್ ಎಲ್ಲರ ಗಮನ ಸೆಳೆದಿತ್ತು. ಅಂದಿನಿಂದಲೂ ಚಿತ್ರದ ಶೀರ್ಷಿಕೆ ಏನಿರಬಹುದೆಂಬ? ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ.
ಬಹು ನಿರೀಕ್ಷಿತ ಈ ಚಿತ್ರಕ್ಕೆ “ಕಲ್ಟ್” ಎಂದು ಹೆಸರಿಡಲಾಗಿದೆ.ನಮ್ಮ ಚಿತ್ರಕ್ಕೆ “ಕಲ್ಟ್” ಎಂದು ಹೆಸರಿಡಲಾಗಿದೆ. ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ. ಸಾ ಮಾಜಿಕ ಜಾಲತಾಣಗಳಲ್ಲಿ ಈ ಪದ ಹೆಚ್ಚು ಪ್ರಚಲಿತವಾಗಿದೆ. ಚಿತ್ರ ಕೂಡ ಯುವಜನತೆಗೆ ಹತ್ತಿರವಾಗಿರಲಿದೆ. ಹಾಗಾಗಿ ಚಿತ್ರಕ್ಕೆ “ಕಲ್ಟ್” ಶೀರ್ಷಿಕೆ ಇಡಲಾಗಿದೆ. ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ನಾಯಕ ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯದಲ್ಲೇ “ಕಲ್ಟ್” ಸೆಟ್ಟೇರಲಿದೆ. ಅದ್ದೂರಿ ಮುಹೂರ್ತ ದೊಂದಿಗೆ ಚಿತ್ರಕ್ಕೆ ಚಾಲನೆ ಸಿಗಲಿದೆ. ಆ ಸಂದರ್ಭದಲ್ಲಿ ಚಿತ್ರದ ಕುರಿತು ಸಾಕಷ್ಟು ಮಾಹಿತಿ ನೀಡುವುದಾಗಿ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.