ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಸ್ಪರ ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಉಂಟುಮಾಡಿದೆ. ಖರ್ಗೆ ಅವರನ್ನು ಶಿವಕುಮಾರ್ ಭೇಟಿಯಾಗಿರುವುದು ನಾನಾ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ. ಎಐಸಿಸಿ ಮುಖ್ಯಸ್ಥ ಮುಖಂಡರಾಗಿರುವ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಇಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಡಿಕೆಶಿ ಖರ್ಗೆ ಭೇಟಿ ತೀವ್ರ ಮಹತ್ವ ಪಡೆದುಕೊಂಡಿದೆ.
ಇದುವರೆಗೆ ನಾಯಕತ್ವ ಬದಲಾವಣೆ ಸಂಬAಧ ಕಾಂಗ್ರೆಸ್ನ ನಾಯಕರು ತಮ್ಮ ಮನಸೋಇಚ್ಛೆ ಹೇಳಿಕೆಗಳನ್ನು ನೀಡುತ್ತಿದ್ದರು. ಈ ಹೇಳಿಕೆಗಳಿಗೆ ಕಡಿವಾಣ ಹಾಕಲು ಎಐಸಿಸಿ ವರಿಷ್ಠರು ಎಷ್ಟೇ ತಾಖೀತು ಮಾಡಿದರೂ ಅಲ್ಲೊಬ್ಬರು, ಇಲ್ಲೊಬ್ಬರು ಹೇಳಿಕೆಗಳನ್ನು ನೀಡುವುದು ನಿಲ್ಲಿಸಲಿರಲಿಲ್ಲ. ಸಂಕ್ರಾAತಿ ಕಳೆದ ನಂತರ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಕೇಳಿಬರುತ್ತಿದ್ದ ಹೇಳಿಕೆಗಳಿಗೆ ಖರ್ಗೆ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಖರ್ಗೆ-ಡಿಕೆಶಿ ಭೇಟಿ ಕುತೂಹಲ



