ಬೆಂಗಳೂರು: ಸೈಬರ್ ವಂಚಕರು ಸುಧಾಕರ ಪತ್ನಿ ಡಾ. ಪ್ರೀತಿ ಅವರಿಗೆ ಡಿಜಿಟಲ್ ಅರೆಸ್ಟ್ ಮಾಡಿ ೧೪ ಲಕ್ಷ ರೂ. ವಸೂಲಿ ಮಾಡಿ ವಂಚಿಸಿದ್ದಾರೆ. ಆಗಸ್ಟ್ ೨೬ರಂದು ಡಾ. ಪ್ರೀತಿ ಸುಧಾಕರ್ ಬೆಳಿಗ್ಗೆ ೯:೩೦ಕ್ಕೆ ಕರೆ ಮಾಡಿ, ನಾವು ಮುಂಬೈ ಸೈಬರ್ ಡಿಪಾರ್ಟ್ಮೆಂಟ್ ನಿಂದ ಮಾತನಾಡ್ತಿರೋದು, ನಿಮ್ಮ ದಾಖಲೆಗಳನ್ನ ಸದ್ಭತ್ ಖಾನ್ ಎಂಬ ಅಪರಿಚಿತ ಬಳಸಿಕೊಂಡಿದ್ದಾನೆ.
ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಇಲ್ಲಿಗಲ್ ಟ್ರಾನ್ಸಾಕ್ಷನ್ ನಡೆಸಿದ್ದಾನೆ? ವಿದೇಶಕ್ಕೆ ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನ ಕಳುಹಿಸಿದ್ದಾನೆ, ಸದ್ಬತ್ ಖಾನ್ ನ ಅರೆಸ್ಟ್ ಮಾಡಲಾಗಿದ್ದು, ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ಇದರ ವಿಚಾರಣೆ ನಡೆಸೋದಕ್ಕೆ ವಿಡಿಯೋ ಕಾಲ್ ಮಾಡಿದ್ದೀವಿ. ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡಲಾಗುವುದು. ನಿಮ್ಮ ಅಕೌಂಟ್ ಇಲ್ಲಿಗಲ್ ಆಗಿದ್ದು ಹಣ ಹಾಕಿ ಎಂದು ಬೆದರಿಕೆ ಹಾಕಿದ್ದಾನೆ.
ಆರ್ ಬಿ ಐ ರೂಲ್ಸ್ ಪರಿಶೀಲನೆ ಮಾಡಿ ೪೫ ನಿಮಿಷದಲ್ಲಿ ವಾಪಸ್ ಹಾಕೋದಾಗಿ ಹೇಳಿ ಪ್ರೀತಿ ಸುಧಾಕರ್ ಅವರಿಂದ ೧೪ ಲಕ್ಷ ರೂ. ಹಣವನ್ನ ಆರ್ ಟಿಜಿಎಸ್ ಮಾಡಿಸಿಕೊಂಡಿಸಿದ್ದಾರೆ. ಹಣ ಹಾಕಿದ ನಂತರ ವAಚನೆಯಾಗಿರೋದು ಪತ್ತೆಯಾಗಿದ್ದು, ಈ ಬಗ್ಗೆ ಪ್ರೀತಿ ಸುಧಾಕರ್ ಸೈಬರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮುAದಿನ ಕಾನೂನು ಕ್ರಮ ಜರುಗಿಸಿದ್ದಾರೆ.