ಶಿವರಾಜ್ಕುಮಾರ್ ನಾಯಕನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ಡ್ಯಾಡ್” ಚಿತ್ರತಂಡದಿAದ ದೀಪಾವಳಿ ಶುಭ ಸಂದರ್ಭದಲ್ಲಿ ವಿಶೇಷ ಪೋಸ್ಟರ್
ಬಿಡುಗಡೆಯಾಗಿದೆ. ಎರಡು ಹಂತಗಳ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಮೈಸೂರು, ನಂದಿ ಬೆಟ್ಟದಲ್ಲಿ ಚಿತ್ರೀಕರಣ ನಡೆದಿದೆ.
ಹರೀಶ್ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ
ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿವಣ್ಣ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.