ಬೆಂಗಳೂರು: ರಾಜ್ಯ ರ್ಕಾರವು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಐತಿಹಾಸಿಕ ನರ್ಧಾರ ಕೈಗೊಂಡಿರುವುದನ್ನು ಸ್ವಾಗತಿಸಿ, ದಲಿತ ಮುಖಂಡರು ಹಾಗೂ ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್ ಹನುಮಂತಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು, ದಶಕಗಳ ಕಾಲದ ಹೋರಾಟಕ್ಕೆ ತರ್ಕಿಕ ಅಂತ್ಯ ಹಾಡಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಿದ್ದಕ್ಕಾಗಿ ಹೂಗುಚ್ಛ ನೀಡಿ ಕೃತಜ್ಞತೆ ರ್ಪಿಸಿದರು.
ಈ ಸಂರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್. ಹನುಮಂತಯ್ಯ ಮಾತನಾಡಿ, “ಒಳಮೀಸಲಾತಿ ಜಾರಿಯು ಶೋಷಿತ ಸಮುದಾಯಗಳ ಸಾಮಾಜಿಕ ನ್ಯಾಯದ ಪಾಲಿಗೆ ಮೈಲಿಗಲ್ಲಾಗಿದೆ.
ಮುಖ್ಯಮಂತ್ರಿಗಳು ತೋರಿದ ರಾಜಕೀಯ ಇಚ್ಛಾಶಕ್ತಿಯಿಂದಾಗಿ ಇಂದು ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಆಶಾಕಿರಣ ಮೂಡಿದೆ. ಇದು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವನ್ನು ಎತ್ತಿಹಿಡಿಯುವ ನರ್ಧಾರ” ಎಂದು ಶ್ಲಾಘಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಮ್ಮ ರ್ಕಾರ ನುಡಿದಂತೆ ನಡೆದಿದೆ. ಸಾಮಾಜಿಕ ನ್ಯಾಯ ದೊರಕಿಸಿಕೊಡುವುದು ನಮ್ಮ ಆದ್ಯ ರ್ತವ್ಯ. ಸುಪ್ರೀಂ ಕರ್ಟ್ ತರ್ಪಿನ ಅನ್ವಯ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿಯ ಸೌಲಭ್ಯ ಸಿಗಬೇಕು ಎಂಬ ಉದ್ದೇಶದಿಂದ ಈ ತರ್ಮಾನ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
ಈ ವೇಳೆ ಕೆಪಿಸಿಸಿ ಪ್ರಧಾನ ಕರ್ಯರ್ಶಿ ಕೆ. ವಿ. ಗೌತಮ್,, ಕೆಪಿಸಿಸಿ ಸದಸ್ಯ ಎಂ. ಅನಿಲ್ ಕುಮಾರ್, ಮುಖಂಡರಾದ ಹರಿಹರ ಹನುಮಂತಪ್ಪ., ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಒಳಮೀಸಲಾತಿ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತ ಮುಖಂಡರಿಂದ ಅಭಿನಂದನೆ



