ಪ್ರಕಾಶ್ ಬೂದೂರು ನೂತನ ಚಿತ್ರವನ್ನು ಆರಂಭಿಸಿದ್ದಾರೆ.ಪಿ.ಸಿ.ಶೇಖರ್ ಈ ನೂತನ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿದ್ದಾರೆ. ನಿರ್ಮಾಪಕ ಪ್ರಕಾಶ್ ಬೂದೂರು, ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಾಯಕ ಡಾರ್ಲಿಂಗ್ ಕೃಷ್ಣ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಚಿತ್ರದ ಘೋಷಣೆಯನ್ನಷ್ಟೇ ಮಾಡಿದ್ದು, ಶೀರ್ಷಿಕೆ ಸೇರಿದಂತೆ ಉಳಿದ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಲಿದೆ.ಇದೊಂದು ಹೊಸ ಜಾನರ್ನ ಚಿತ್ರ. ಈ ಜಾನರ್ ನನಗೆ ಹಾಗೂ ನಿರ್ದೇಶಕರಿಗೆ ಇಬ್ಬರಿಗೂ ಹೊಸತು. ನಾನು ಈವರೆಗೂ ಮಾಡಿರದ ಪಾತ್ರ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಬಹಳ ಖುಷಿಯಾಗಿದೆ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದ್ದಾರೆ. ಪ್ರಶಾಂತ್ ರಾಜಪ್ಪ ಅವರು ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ಹೇಳಿದರು.



