ಬೆಂಗಳೂರು: ಯಾರು ಕೂಡ ಜೈಲಿನ ಬಳಿ ಬರಬೇಡಿ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಜೈಲಿನಿಂದಲೇ ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. `ಅಭಿಮಾನಿಗಳು ಯಾರೂ ಜೈಲಿಗೆ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಯಾರು ಕೂಡ ಜೈಲಿನ ಬಳಿ ಬರಬೇಡಿ’ ಎಂದು ದರ್ಶನ್ ಕೇಳಿಕೊಂಡಿದ್ದಾರೆ.
ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ. ಅದರಲ್ಲೂ ನಿನ್ನೆ ವಿಶೇಷಚೇತನ ಯುವತಿ ಸೌಮ್ಯಾ ಭೇಟಿಗೆ ಆಗಮಿಸಿದ್ದ ಬಗ್ಗೆ ಬೇಸರವಿದೆ ಎಂದು ತಿಳಿಸಿದ್ದಾರೆ.ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಸೌಮ್ಯಾ ಹಠ ಮಾಡಿದ್ದರು. ಅನ್ನ, ಆಹಾರ ಸೇವಿಸದೇ ಹಠ ಹಿಡಿದಿದ್ದರು. ನಟ ದರ್ಶನ್ ಕೊಡಿಸಿದ್ದ ಆಟೋದಲ್ಲಿ ಪೋಷಕರ ಜೊತೆ ಆಗಮಿಸಿದ್ದರು.