ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರುಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕಿನ ದಂಡಾಧಿಕಾರಿಗಳಾದ ಎಂ. ವಿ.ರೂಪ ರವರು ಶ್ರೀ ಕನಕದಾಸರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಸ್ಪಾರ್ಚನೆ ಮಾಡುವ ಮೂಲಕ ಬೆಳ್ಳಿ ರಥದ ಮೆರವಣಿಗೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಾಲ್ಲೂಕು ಕುರುಬ ಸಂಘದ ಅಧ್ಯಕ್ಷರಾದ ಜಗದೀಶ್ರವರು ಕನಕದಾಸ ರವರ ಭಾವ ಚಿತ್ರಕ್ಕೆ ಹೂ ಮಾಲೆಯನ್ನು ಹಾಕುವ ಮೂಲಕ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರವಿರುವ ಬೆಳ್ಳಿರಥದ ಮೆರವಣಿಗೆ ಯನ್ನು ಪಟ್ಟಣದಮುಖ್ಯ ರಸ್ತೆಯಲ್ಲಿ, ಗೊಂಬೆ ಕುಣಿತ, ಡೊಳ್ಳು ಹಾಗೂ ತಮಟೆ ವಾದ್ಯಗಳೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ, ಕುರುಬ ಸಮಾಜದ ಮುಖಂಡರಾದ ತಿಮ್ಮಲಾಪುರ ಮೂರ್ತಿ, ಕೋನಸಾಗರ ಅಂಜಿನೇಯ ಹಾಗೂತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರುದ್ರಮುನಿಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ
ಗಳು, ಕುರುಬ ಸಮಾಜದ ಮುಖಂ ಡರು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.