ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸದಲ್ಲಿದ್ದ ಮಾಜಿ ಶಾಸಕ ವೈ.ಎಸ್.ವಿ.ದತ್ತ ಇದೀಗ ಟಿಕೆಟ್ ವಂಚಿತರಾಗಿ ತೀವ್ರ ಅಸಮಾಧಾನಗೊಂಡು ತಮ್ಮ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ದತ್ತಾ, ಪರ್ಯಾವಾಗಿ ಮಾರ್ಗ ಕಂಡುಕೊಳ್ಳಲು ಬಹಿರಂಗ ಪತ್ರದ ಮೂಲಕ ಅಭಿಮಾನಿಗಳ ಸಭೆ ಕರೆದಿದ್ದಾರೆ. ನನ್ನ ಮತ್ತು ಬೆಂಬಲಿಗರ ಆತ್ಮಗೌರವ ಸ್ವಾಭಿಮಾನಕ್ಕೆ ಅಪಮಾನವಾಗಿದೆ. ಇದೇ ಏ.9ರಂದು ಬೆಳಗ್ಗೆ 11ಕ್ಕೆ ಅಭಿಮಾನಿಗಳ ಸಭೆ ಕರೆದಿದ್ದೇನೆ.
ಹಣವಿಲ್ಲದ ಜಾತಿ ಇಲ್ಲದ ನನ್ನನ್ನು ದತ್ತಣ್ಣ ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿರುವ ಬೆಂಬಲಿಗರು ಬಂದು ನಿರ್ಧಾರ ಕೈಗೊಳ್ಳಲು ಸಹಕಾರ ನೀಡಬೇಕು ಎಂದು ದತ್ತಾ ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನಿಸಿದ್ದಾರೆ.
Leave a Review