ದಾವಣಗೆರೆ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ರಂಗು ಹೆಚ್ಚಾಗಿದ್ದು ಪ್ರಬಲ ಪಕ್ಷಗಳ ಹಿರಿಯ ನಾಯಕರು ಪ್ರಚಾರದಲ್ಲಿ ಭಾಗಿಯಾಗುವ ಮೂಲಕ ಮತಭೇಟೆ ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ರಾಜ್ಯಕ್ಕೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿ ನೀಡಲಿದ್ದಾರೆ.
ಇಬ್ಬರು ನಾಯಕರು ಕರ್ನಾಟಕದ ರಾಜಕೀಯದಲ್ಲಿ ಪ್ರಾಮಾಣಿಕತೆ ಮತ್ತು ಸಮಗ್ರತೆ ಯನ್ನು ತರಲು ಕೆಲಸ ಮಾಡಲು ಎಲ್ಲಾ 224 ಕ್ಷೇತ್ರಗಳ…
ಪಕ್ಷದ ರಾಜ್ಯ ಪದಾಧಿಕಾರಿಗಳು ಮತ್ತು ಬ್ಲಾಕ್ ಹಾಗೂ ವೃತ್ತ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಹವರ್ತಿ ಭಗವಂತ್ ಮಾನ್ ಅವರೊಂದಿಗೆ ಇಂದು ದಾವಣಗೆರೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ರಾಜ್ಯದ ಜನರಿಗೆ ಪ್ರಮುಖ ಯೋಜನೆಗಳು ಮತ್ತು ಖಾತರಿಗಳನ್ನು ಘೋಷಿಸಲಾಗುವುದು ಎಂದು ರಾಜ್ಯ ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.
Leave a Review