ಚಿತ್ರದುರ್ಗ: ದಾವಣಗೆರೆ ರಸ್ತೆ ಹಾಗೂ ಕಾವಾಡಿಗರ ಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೆ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಿ, ರೈಲ್ವೆ ಮಂಡಳಿ ಅನುಮೋದನೆಗಾಗಿ ಕಳಿಸಿಕೊಡಲಾಗಿದೆ. ರೈಲ್ವೆ ಮಂಡಳಿ ಶೀಘ್ರವೇ ಯೋಜನೆಗೆ ಅನುಮೋದನೆ ನೀಡಲಿದ್ದು. ಜೂನ್ ವೇಳೆಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ವ್ಯಕ್ತಪಡಿಸಿದರು.
ಅಮೃತ ಭಾರತ ರೈಲ್ವೆ ನಿಲ್ದಾಣ ಪುನರ ಅಭಿವೃದ್ಧಿ ಯೋಜನೆಯಡಿಯಲ್ಲಿ, 41ಸಾವಿರ ಕೋಟಿ ವೆಚ್ಚದಲ್ಲಿ ದೇಶದ ವಿವಿಧ 554 ಪ್ರಮುಖ ರೈಲ್ವೆ ನಿಲ್ದಾಣಗಳ ಪುನರಾವೃದ್ಧಿಗೆ 1200 ಮೇಲು ಹಾಗೂ ಕೆಲಸೇತುವೆ ವಗಳು ನಿರ್ಮಾಣವಾಗುತ್ತಿವೆ. ಯೋಜನೆಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಅಮೃತ ಯೋಜನೆ ಅಡಿಯಲ್ಲಿ 11.78ಕೋಟಿ ವೆಚ್ಚದಲ್ಲಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣವನ್ನು ಸಹ ನವೀಕರಿಸಿ ಮೇಲ್ದರ್ಜೆಗೆ ಏರಿಸಲಾಗುವುದು. ಇದರ ಅಂಗವಾಗಿ ನಗರ ರೈಲ್ವೆ ನಿಲ್ದಾಣದಲ್ಲಿ ಆರಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮಾತನಾಡಿದರು.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಪಾಲ್ಗೊಂಡು ಮಾತನಾಡಿ. ದಾವಣಗೆರೆ,ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲ್ವೆ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣಗಳು ಹಂತದಲ್ಲಿದೆ.ವರ್ಷಾಂತ್ಯದ ವೇಳೆ ನೇರ ರೈಲ್ವೆ ಯೋಜನೆ ಕಾಮಗಾರಿ ಆರಂಭ ವಾಗಲಿದೆ.ಚಿತ್ರದುರ್ಗ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಯೋಜನೆಗೆ ಜಿಲ್ಲೆಗೆ ಪ್ರಧಾನಿಗಳ ಅತಿ ದೊಡ್ಡ ಕೊಡುಗೆ ಯಾಗಿದೆ. ಸುಮಾ
ರು12 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಮಾಡಲಾಗುವುದು ಎಂದು ಹೇಳಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಸಂದೇಶ ಭಾಷಣ ವನ್ನು ಈ ಸಂದರ್ಭದಲ್ಲಿ ಪ್ರಸಾರ ಮಾಡಲಾಯಿತು. ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಶವ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸೇರಿದಂತೆ ಹಲೋ ರಾಜ್ಯಗಳ ರಾಜ್ಯಪಾಲರು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಂತ್ರಿಗಳು ಮತ್ತು ಸಂಸದರು ಹಾಗೂ ಶಾಸಕರು ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಈ ಸಭಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,ನೈರುತ್ಯ ರೈಲ್ವೆ ಮುಖ್ಯ ಇಂಜಿನಿಯರ್ ಬಿ.ರೋಹನ್ ಡೋಂಗ್ರೆ, ಡಿ.ಎಸ್.ಓ ಚಂದ್ರಶೇಖರ್ ಕಂಬಾಳಿ ಮಠ, ನಗರಸಭಾ ಸದಸ್ಯ ರಾದ ವೆಂಕಟೇಶ್, ತಾರಕೇಶ್ವರಿ ಇತರ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.