ಬೆಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಜ್ಯ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಕೇಂದ್ರ ಸರ್ಕಾರದ ವಿರುದ್ಧ ದೂರಿದ್ದಾರೆ.
ಜಂಟಿ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿರುವ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡುತ್ತಿದೆ. ಇದು ಬಿಜೆಪಿಯ ಬೆಲೆ ಏರಿಕೆಯ ಬರೆ ಎಂದು ಸುರ್ಜೇವಾಲಾ ಟೀಕಿಸಿದರು.
ಕೇವಲ 11 ದಿನಗಳಲ್ಲಿ 4 ಬಾರಿ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸುಮಾರು 7.50ಪೈಸೆಗೂ ಹೆಚ್ಚು ದರ ಹೆಚ್ಚಳ ಮಾಡಲಾಗಿದೆ. ಬಿಜೆಪಿ ಕಳೆದ 11 ವರ್ಷಗಳಿಂದ ಕರ್ನಾಟಕ ಜನತೆಯ ದುಡ್ಡನ್ನು ಪಿಕ್ಪಾಕೆಟ್ ಮಾಡುತ್ತಿದೆ ಎಂದು ದೂರಿದರು.
ವಿಡೀಯೋ ಪ್ರದರ್ಶನ ಸಂದರ್ಭದಲ್ಲಿ ಯುಪಿಎ ಸರ್ಕಾರ ಇದ್ದಾಗ ಮೋದಿ ಮಾತನಾಡಿದ್ದ ಮಾತುಗಳು ಇದೀಗ ಅವರು ಪ್ರಧಾನಿಯಾದ ನಂತರ ಮಾತನಾಡುವ ರೀತಿಯನ್ನು ಪ್ರದರ್ಶಿಸಲಾಯಿತು.
ಸ್ವಾತಂತ್ರ್ಯ ಸಿಕ್ಕ ಬಳಿಕ ಮೊಟ್ಟ ಮೊದಲ ಬಾರಿಗೆ ಲೀಟರ್ ಒಂದಕ್ಕೆ 110 ರೂಪಾಯಿ ಮಾಡಲಾಗಿದೆ ಎಂದು ತಮ್ಮ ಮಾತಿನ ಉದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ದರ ಏರಿಕೆಗೆ `ಕೈ’ ಕಿಡಿ ದಿನೇ ದಿನೇ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳಕ್ಕೆ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ



