ದೇವನಹಳ್ಳಿ: ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, `ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದು’ ಎಂದರು.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಜಿಲ್ಲೆಯಲ್ಲಿ ಎಚ್.ಪಿ.ವಿ ಲಸಿಕಾಕರಣ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 14ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತದೆ. ಪೋಷಕರು ತಪ್ಪದೇ ತಮ್ಮ 14 ರಿಂದ 15 ವರ್ಷ ವಯೋಮಿತಿಯೊಳಗಿರುವ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದರು.
ಜಿಲ್ಲೆಯಲ್ಲಿ ಸಮೀಕ್ಷಾ ವರದಿಯಂತೆ 14 ವರ್ಷದಿಂದ 15 ವರ್ಷದೊಳಗಿನ 12097 ಹೆಣ್ಣು ಮಕ್ಕಳಿದ್ದಾರೆ. ಇವರಿಗೆ ಲಸಿಕೆ ಹಾಕುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಈಗಾಗಲೇ 1803 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ ಮಕ್ಕಳಿಗೆ ಕೂಡ ತಪ್ಪದೇ ಲಸಿಕೆ ಹಾಕಿಸಿ ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
*ಎಚ್.ಪಿ.ವಿ ಲಸಿಕೆಗಳು ಸುರಕ್ಷಿತವೇ * ಹೌದು. ಎಲ್ಲಾ ಲಸಿಕೆಗಳಂತೆ, ಊPಗಿ ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಬಹಳ ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ. ಅಧ್ಯಯನಗಳು ಊPಗಿ ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಪ್ರದರ್ಶಿಸಿವೆ. 2006 ರಲ್ಲಿ ಪರವಾನಗಿ ಪಡೆದ ನಂತರ, 50 ಕೋಟಿಗೂ ಹೆಚ್ಚು ಡೋಸ್ಗಳ ಊPಗಿ ಲಸಿಕೆಗಳನ್ನು ವಿತರಿಸಲಾಗಿದೆ. ಪರವಾನಗಿ ನಂತರದ ಕಣ್ಗಾವಲು ಅನಾಫಿಲ್ಯಾಕ್ಸಿಸ್ನ ಅಪರೂಪದ ವರದಿಗಳನ್ನು ಹೊರತುಪಡಿಸಿ ಇಲ್ಲಿಯವರೆಗೆ ಯಾವುದೇ ಗಂಭೀರ ಸುರಕ್ಷತಾ ಸಮಸ್ಯೆಗಳನ್ನು ಪತ್ತೆಹಚ್ಚಿಲ್ಲ.
ಎಚ್.ಪಿ.ವಿ ಲಸಿಕೆ ಹೇಗೆ ಕೆಲಸ ಮಾಡುತ್ತದೆ * ಇತರ ಯಾವುದೇ ಲಸಿಕೆಯಂತೆ, ಊPಗಿ ಲಸಿಕೆ (ವೈರಸ್ ತರಹದ ಕಣಗಳು -ಗಿಐP ಗಳು), ಒಮ್ಮೆ ಪರಿಚಯಿಸಲ್ಪಟ್ಟ ನಂತರ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ, ನಿರ್ದಿಷ್ಟ ಕ್ಯಾನ್ಸರ್-ಉಂಟುಮಾಡುವ ಪ್ರಕಾರಗಳಿಂದ ಭವಿಷ್ಯದ ಸೋಂಕಿನಿAದ ರಕ್ಷಿಸುವ ಪ್ರತಿಕಾಯಗಳನ್ನು ಸೃಷ್ಟಿಸುತ್ತದೆ.
ಎಚ್.ಪಿ.ವಿ ಲಸಿಕೆಗಳು ಎಷ್ಟು ಪರಿಣಾಮಕಾರಿ * ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ 93-100% ರಷ್ಟು, ಊPಗಿ ಲಸಿಕೆಗಳು ಹೆಚ್ಚು ರೋಗನಿರೋಧಕ ಶಕ್ತಿಯನ್ನು ಹೊಂದಿವೆ. ಲಸಿಕೆಗೆ ಸೀರಮ್ ಶಾಸ್ತ್ರದ ಪ್ರತಿಕ್ರಿಯೆಯು ನೈಸರ್ಗಿಕ ಸೋಂಕಿನ ನಂತರದ ಪ್ರತಿಕ್ರಿಯೆಗಿಂತ ಹೆಚ್ಚು ಬಲವಾಗಿರುತ್ತದೆ.
ಎಚ್.ಪಿ.ವಿ ಲಸಿಕೆ ಎಲ್ಲಿ ಹಾಕಿಸಬೇಕು * ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತದೆ. ಪೋಷಕರು ತಪ್ಪದೇ ತಮ್ಮ 14 ರಿಂದ 15 ವರ್ಷ ವಯೋಮಿತಿಯೊಳಗಿರುವ ಮಕ್ಕಳಿಗೆ ಲಸಿಕೆ ಹಾಕಿಸಿ. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ, ಸೀಮಾ ಮಾಬಳೆ, ಜಿಲ್ಲಾ ಕಾರ್ಯ
ಕ್ರಮಾಧಿಕಾರಿ ಡಾ. ನಾಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ: ಡಿಸಿ ಅನುರಾಧ



