ಬೆಂಗಳೂರು ನಗರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯೂ ಚುರುಕಾಗಿ ನಡೆಯುತ್ತಿದ್ದು, 7 ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಒಗಳುಮತದಾರರ ಮನೆ ಮನೆ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್ ಅನ್ನು ನೀಡಿ, ಭರ್ತಿ ಮಾಡಿದ ಮತದಾರರಿಂದ ಫಾರ್ಮ್ ಮರು ಪಡೆಯುತ್ತಿದ್ದಾರೆ ಎಂದು ಅಪರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್. ಅವರು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೋಂದಾಯಿತ ಮಾನ್ಯತೆ ಪಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಎಲ್ಲ ಬಿಎಲ್ಒಗಳು ಹಾಗೂ ಸೂಪರ್ ವೈಸರ್ ಗಳೊಂದಿಗೆ ಪ್ರತಿದಿನ ವರ್ಚುವಲ್ ಸಭೆ ನಡೆಸಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಎನ್ಯುಮರೇಷನ್
ಫಾರ್ಮ್ ವಿತರಣೆ ಆಗಿರುವ ಪ್ರತಿಯೊಬ್ಬರೂ ಅವುಗಳನ್ನು ಭರ್ತಿ ಮಾಡಿ ಹಿಂದಿರುಗಿಸುವುದು ಕಡ್ಡಾಯ ಬಿಎಲ್ಒಗಳು ಮರಳಿ ಪಡೆಯಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿಯ ಕುರಿತ ಸಂಪೂರ್ಣ ವರದಿಗಳನ್ನು ನಿಗಧಿತವಾಗಿ ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡಲಾಗುತ್ತಿದ್ದು, ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಕಂಡು ಬಂದಿರುವ, ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣ ಸೇರಿದಂತೆ ಮತ್ತಿತರ ವಿವರಗಳನ್ನು ತಮ್ಮ ಪಕ್ಷಗಳ ಬಿ.ಎಲ್.ಎ ಗಳಿಂದ ಪರಿಶೀಲಿಸಿಕೊಂಡು ಇದರಲ್ಲಿ ಯಾವುದೇ ಗೊಂದಲಗಳಿದ್ದಲ್ಲಿ ಬಗೆಹರಿಸಿಕೊಳ್ಳುವಂತೆ ಮತ್ತು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯದ ಸಂಪೂರ್ಣ ಯಶಸ್ಸಿಗೆ ಅಗತ್ಯ ಸಹಕಾರ ನೀಡುವಂತೆ ಕೋರಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್, ಚುನಾವಣಾ ಶಾಖೆಯ ಶಿರಸ್ತೇದಾರ್ ಮೈಕಲ್ ಹಾಗೂ ಚುನಾವಣಾ ಸಿಬ್ಬಂದಿಗಳು ಸೇರಿದಂತೆ ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಉಪಸ್ಥಿತರಿದ್ದರು.
ಎಸ್ಐಆರ್ ರಾಜಕೀಯ ಪಕ್ಷಗಳ ಸಭೆ ನಡೆಸಿದ ಡಿಸಿ



