ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದಿಢೀರ್ ಎಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪಕ್ಷದ ವರಿಷ್ಠರ ಕರೆಯ ಮೇರೆಗೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಯಾವ ಕಾರಣಕ್ಕಾಗಿ ದೆಹಲಿಗೆ ತೆರಳಿದ್ದಾರೆ ಎಂಬುದು ನಿಗೂಢವಾಗಿಯೇ ಇದೆ.
ದೆಹಲಿಗೆ ತೆರಳಿರುವ ಉಪಮುಖ್ಯಮಂತ್ರಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಇತ್ತೀಚಿನ ರಾಜ್ಯರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿರುವುದು ಕಾಂಗ್ರೆಸ್ ಪಕ್ಷದ ವಲಯದಲ್ಲಿ ಹಾಗೂ ರಾಜ್ಯರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ದೆಹಲಿಗೆ ತೆರಳುವುದಕ್ಕೂ ಮುನ್ನ ಉಪಮುಖ್ಯಮಂತ್ರಿಯವರು ಲೋಕೋಪಯೋಗಿ ಸಚಿವ…
ಪಕ್ಷದ ಕಾಯಾಧ್ಯಕ್ಷರೂ ಆಗಿರುವ ಸತೀಶ್ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಕೆಲ ಕಾಲ ಮಾತುಕತೆ ನಡೆಸಿದ್ದಾರೆ.ಮಾತುಕತೆ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿಯವರು ಬಂದರೂ ಮಾತುಕತೆಯಾಡಿದರು ನಂತರ ತೆರಳಿದರು ಎಂದು ಇಂದು ತಿಳಿಸಿದ್ದು, ಲೋಕಸಭೆ ಚುನಾವಣೆ, ಪಕ್ಷ ಸಂಘಟನೆ, ಬೆಳಗಾವಿ ಪಕ್ಷದ ಜಿಲ್ಲಾಧ್ಯಕ್ಷ ಬಗ್ಗೆ ಮಾತುಕತೆ ನಡೆಯಿತು ಎಂದು ಹೇಳಿದ್ದಾರೆ.