ಕನಕಪುರ: ಬೇಸಿಗೆ ಆರಂಭವಾಗಿದ್ದು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ,ಜಾನುವಾರುಗಳಿಗೆ ಮೇವಿ ನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನಕಪುರ ತಾಲೂಕು ಮಟ್ಟದ ಕೆ.ಡಿ.ಪಿ.ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರ ಅಸ್ತಿತ್ವಕ್ಕೆ ಬಂದಾಗಿ ನಿಂದಲೂ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ರೀತಿಯ ಸವಲತ್ತುಗಳನ್ನು ಫಲಾನುಭವಿಗಳಿಗೆ ನೀಡಿದೆ, ಕನಕಪುರ ತಾಲೂಕಿನಲ್ಲಿ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಸರ್ಕಾರ ಸವಲತ್ತುಗಳನ್ನು ಸಮರ್ಪಕ ವಾಗಿ ಫಲಾನುಭವಿಗಳಿಗೆ ತಲುಪಿಸುವಂತಹ ಕೆಲಸ ಗಳನ್ನು ಮಾಡುವುದರ ಜೊತೆಗೆ ಆ ಸವಲತ್ತುಗಳು ಫಲಾನುಭವಿಗಳಿಗೆ ತಲುಪಿದೆಯೇ ಎಂಬುದರ ಕುರಿತು ಫಲಾನುಭವಿಗಳನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಪಡೆದು ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕು, ಫಲಾನುಭವಿಗಳು ಸವಲತ್ತುಗಳನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳು ಹಣ ಪಡೆದುಕೊಂಡಿದ್ದರೆ ಆ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಜ್ಯ ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಸಂದರ್ಭದಲ್ಲಿ ಹಣ ಪಡೆದಿದ್ದರೆ ಅಂತಹ ಅಧಿಕಾರಿ,ಸಿಬ್ಬಂದಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಕೆಲಸದ ಒತ್ತಡ ಹೆಚ್ಚಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.ಬೆಂಗಳೂರು ದಕ್ಷಿಣ ಜಿಲ್ಲೆ ವಿಶೇಷವಾದ ಜಿಲ್ಲೆಯಾಗಿದೆ. ಇದು ಬಹಳ ಬಲಿಷ್ಠವಾದ ನಾಯಕರುಗಳನ್ನು ನೀಡಿರುವ ಜಿಲ್ಲೆ. ಚನ್ನಪಟ್ಟಣಕ್ಕೆ ಖಾಸಗಿ ಮೆಡಿಕಲ್ ಕಾಲೇಜು, ರಾಮನಗರದಲ್ಲಿ ವೈದ್ಯಕೀಯ ವಿಶ್ವವಿದ್ಯಾಲಯ, ಹಾರೋಹಳ್ಳಿಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದ್ದು,ತುಂಗಣಿಯ ರಾಯಸಂದ್ರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶಂಕುಸ್ಥಾಪನೆ ಮಾಡ ಲಾಗುವುದು,ಜನರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ನಾಲ್ಕು ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸ ಲಾಗುತ್ತಿದೆ. ಕನಕಪುರದಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಮನಗರದ ರಸ್ತೆಗಳನ್ನು ಅಗಲೀಕರಣ ಮಾಡಲು ಸರ್ಕಾರದಿಂದ ಹಣ ಮಂಜೂರು ಮಾಡಲು ಕ್ರಮ ವಹಿಸಲಾಗುವುದು. ಕನಕಪುರ ಟೌನಿಗೆ ರಿಂಗ್ ರೋಡ್ ಮಾಡಲು ಸಿದ್ದತೆ ಕೈಗೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್,ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ವೇದಿಕೆಯಲ್ಲಿದ್ದರು,ಕನಕಪುರ ತಾಲ್ಲೂಕು ತಹಶೀಲ್ದಾರ್ ಸಂಜಯ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಭಿಲಾಷ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.ಉಪ ಮುಖ್ಯಮಂತ್ರಿಗಳಿಂದ ಕನಕಪುರ ತಾಲ್ಲೂಕು ಪಂಚಾಯತ್ ಕಟ್ಟಡದಲ್ಲಿ ನೂತನ ಸಭಾಂಗಣ ಉದ್ಘಾಟಿಸಿದರು. ನಗರದ ತಾಲ್ಲೂಕು ಪಂಚಾಯತ್ ಕಟ್ಟಡದಲ್ಲಿ ನೂತನ ಸಭಾಂಗಣವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಕನಕಪುರ ತಾಲ್ಲೂಕು ತಹಶೀಲ್ದಾರ್ ಸಂಜಯ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಭಿಲಾಷ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಾರ್ತಾ ಇಲಾಖೆಯ ಮಾಧ್ಯಮ ಸಂಪರ್ಕ ನೂತನ ವಾಹನಕ್ಕೆ ಚಾಲನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಸಂಪರ್ಕದ ನೂತನ ವಾಹನಕ್ಕೆ ಕನಕಪುರದ ತಾಲ್ಲೂಕು ಪಂಚಾಯತ್ ಕಚೇರಿ ಸಂಕೀರ್ಣದ ಆವರಣದಲ್ಲಿ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಕನಕಪುರ ತಾಲ್ಲೂಕು ತಹಶೀಲ್ದಾರ್ ಸಂಜಯ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಭಿಲಾಷ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್.ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಲು ಡಿಸಿಎಂ ಸೂಚನೆ



