ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು.
ಬಳಿಕ ಸತ್ತಿರುವ ನವಿಲುಗಳನ್ನು ತೆಗೆದುಕೊಂಡು ಹೋದರು. ನವಿಲುಗಳಿಗೆ ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಿಲುಗಳ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಗೆ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.